ADVERTISEMENT

ಡಿಸಿಇಟಿ | ದಾಖಲೆ ಪರಿಶೀಲನೆ 2 ದಿನ ವಿಸ್ತರಣೆ: ಕೆಇಎ

​ಪ್ರಜಾವಾಣಿ ವಾರ್ತೆ
Published 13 ಜೂನ್ 2025, 5:04 IST
Last Updated 13 ಜೂನ್ 2025, 5:04 IST
<div class="paragraphs"><p>ಕೆಇಎ</p></div>

ಕೆಇಎ

   

ಬೆಂಗಳೂರು: ಡಿಸಿಇಟಿ ದಾಖಲೆಗಳ ಪರಿಶೀಲನೆಯನ್ನು ಎರಡು ದಿನ ವಿಸ್ತರಿಸಲಾಗಿದೆ.

ಜೂನ್ 14 ಮತ್ತು 16ರಂದು ನಿಗದಿತ ಕಾಲೇಜುಗಳಲ್ಲಿ ದಾಖಲೆ ಪರಿಶೀಲನೆಗೆ ಅವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ADVERTISEMENT

ವಿದ್ಯಾರ್ಥಿಗಳ ಮನವಿ ಮೇರೆಗೆ ಶುಕ್ರವಾರ (ಜೂನ್ 13) ಕೊನೆ ಆಗಬೇಕಾಗಿದ್ದ ದಾಖಲೆ ಪರಿಶೀಲನೆಯನ್ನು ಎರಡು ದಿನ ವಿಸ್ತರಿಸಲಾಗಿದೆ. ವಿದ್ಯಾರ್ಥಿಗಳು ಇದರ ಉಪಯೋಗ ಪಡೆಯಬಹುದು. ಮೂಲ ದಾಖಲೆಗಳ ಸಮೇತ ವಿದ್ಯಾರ್ಥಿಗಳು ತೆರಳಬೇಕು ಎಂದು ಅವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.