ಕಡತ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ಎರಡನೇ ವರ್ಷದ ಎಂಜಿನಿಯರಿಂಗ್ ನೇರ ಪ್ರವೇಶಕ್ಕೆ (ಲ್ಯಾಟರಲ್ ಎಂಟ್ರಿ) ನಡೆಸಿದ ಡಿಪ್ಲೊಮಾ ಸಿಇಟಿ-25ರ ಅರ್ಜಿಯಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಜೂನ್ 5ರಿಂದ 8ರವರೆಗೆ ಅವಕಾಶ ನೀಡಲಾಗಿದೆ.
ಅಭ್ಯರ್ಥಿಗಳ ಕೋರಿಕೆ ಮೇರೆಗೆ ಆದಾಯ, ಮೀಸಲಾತಿ, ಅಂಕಗಳ ತಪ್ಪು ನಮೂದು ಮತ್ತಿತರ ಅಂಶಗಳ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಯ ಹೆಸರು, ತಂದೆ-ತಾಯಿ ಹೆಸರು, ಜನ್ಮ ದಿನಾಂಕ, ಲಿಂಗ, ಮೊಬೈಲ್ ಸಂಖ್ಯೆ ಬದಲಾವಣೆಗೆ ಅವಕಾಶ ಇರುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.