ಬೆಂಗಳೂರು: ಎಂಜಿನಿಯರಿಂಗ್ ಕೋರ್ಸ್‌ಗಳ ಮೂರನೇ ಸೆಮಿಸ್ಟರ್‌ಗೆ ಪ್ರವೇಶ ಪಡೆಯುವ ಡಿಪ್ಲೊಮಾ ವಿದ್ಯಾರ್ಥಿಗಳ ಮೊದಲ ಸುತ್ತಿನ ಸೀಟು ಹಂಚಿಕೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.
ಆಯ್ಕೆ (ಛಾಯ್ಸ್) ಮಾಡಿಕೊಳ್ಳಲು ಜುಲೈ 24ರ ಬೆಳಿಗ್ಗೆ 11ರವರೆಗೆ ಅವಕಾಶ ನೀಡಲಾಗಿದೆ. ಮೊದಲ ಸುತ್ತಿನ ಪ್ರವೇಶ ಪ್ರಕ್ರಿಯೆ ಜುಲೈ 26ಕ್ಕೆ ಕೊನೆಗೊಳ್ಳಲಿದೆ. ಛಾಯ್ಸ್-1 ಮತ್ತು 2 ಅನ್ನು ಆಯ್ಕೆ ಮಾಡಿಕೊಂಡವರು ಜುಲೈ 25ರ ಸಂಜೆ 4ರ ಒಳಗೆ ಶುಲ್ಕ ಪಾವತಿಸಿ, ಪ್ರವೇಶ ಪತ್ರ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಪ್ರಾಧಿಕಾರ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.