ADVERTISEMENT

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 23 ಮೇ 2023, 6:06 IST
Last Updated 23 ಮೇ 2023, 6:06 IST
   

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸೋಮವಾರ ಸಂಜೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಅವರ ಆಶೀರ್ವಾದ ಪಡೆದೆ. ಈ ವೇಳೆ ಅವರು ಪ್ರೀತಿಯಿಂದ ಸನ್ಮಾನಿಸಿ ಶುಭ ಹಾರೈಸಿದರು. ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ದೇವೇಗೌಡ ಅವರು ಇಟ್ಟ ಪ್ರತೀ ಹೆಜ್ಜೆಗಳು ನಮಗೆ ಒಂದು ಪಾಠ ಎಂದು ಹೇಳಿದ್ದಾರೆ.

ಇದಕ್ಕೂ ಮುನ್ನ ಅವರು, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿವಾಸಕ್ಕೂ ಭೇಟಿ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.