ADVERTISEMENT

ಕಾವೇರಿ ನೀರು: ಸರ್ವಪಕ್ಷ ಸಭೆ ಕರೆಯಲಾಗುವುದು ಎಂದ ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2021, 18:18 IST
Last Updated 9 ಮಾರ್ಚ್ 2021, 18:18 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಬೆಂಗಳೂರು: ‘ಕಾವೇರಿಯ 45 ಟಿಎಂಸಿ ಅಡಿ ಹೆಚ್ಚುವರಿ ನೀರನ್ನು ಅಕ್ರಮವಾಗಿ ಬಳಸಿಕೊಳ್ಳಲು ವೆಲ್ಲಾರು– ವೈಗೈ–ಗುಂಡಾರು ನದಿಗಳನ್ನು ಕಾವೇರಿಯೊಂದಿಗೆ ಜೋಡಿಸುವ ಯೋಜನೆಯನ್ನು ತಮಿಳುನಾಡು ಕೈಗೊಳ್ಳದಂತೆ ಎಲ್ಲ ಕ್ರಮಗಳನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ. ಈ ಬಗ್ಗೆ ಚರ್ಚಿಸಲು ಶೀಘ್ರದಲ್ಲಿ ಸರ್ವಪಕ್ಷ ಸಭೆ ಕರೆಯಲಾಗುವುದು’ ಎಂದು ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಕಾವೇರಿ ನದಿ ಪಾತ್ರದಲ್ಲಿ ತಮಿಳುನಾಡು ಕೈಗೊಂಡಿರುವ ಅಕ್ರಮ ಯೋಜನೆಯ ಕುರಿತು ವಿಧಾನ ಪರಿಷತ್‌ನಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಅವರು, ‘ನೆಲ, ಜಲ ವಿಷಯದಲ್ಲಿ ಯಾವುದೇ ರಾಜಿ ಇಲ್ಲ. ರಾಜ್ಯದ ಹಿತ ಕಾಪಾಡಲು ಸರ್ಕಾರ ಬದ್ಧ. ಯೋಜನೆಗೆ ಆಕ್ಷೇಪಣೆ ವ್ಯಕ್ತಪಡಿಸಿ ಪ್ರಧಾನಿ ಮತ್ತು ಕೇಂದ್ರ ಜಲಶಕ್ತಿ ಸಚಿವರಿಗೆ ಮಾ.1ರಂದು ಮುಖ್ಯಮಂತ್ರಿ ಪತ್ರ ಬರೆದಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT