ADVERTISEMENT

ಬಂಗಾರದ ಕಿರೀಟ ಸರ್ಕಾರಕ್ಕೆ ಒಪ್ಪಿಸಿದ ಡಿಸಿಎಂ ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 10 ಡಿಸೆಂಬರ್ 2020, 13:04 IST
Last Updated 10 ಡಿಸೆಂಬರ್ 2020, 13:04 IST
ಡಿಸಿಎಂ ಗೋವಿಂದ ಎಂ. ಕಾರಜೋಳ ಅವರು ಬಂಗಾರದ ಕಿರೀಟ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಬಾಸ್ಕರ್ ಅವರ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.
ಡಿಸಿಎಂ ಗೋವಿಂದ ಎಂ. ಕಾರಜೋಳ ಅವರು ಬಂಗಾರದ ಕಿರೀಟ ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಬಾಸ್ಕರ್ ಅವರ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.    

ಬೆಂಗಳೂರು: ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ ಕ್ಷೇತ್ರದ ಕಾರಜೋಳ ಗ್ರಾಮಸ್ಥರು ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ ಅವರಿಗೆ ಸಮರ್ಪಿಸಿದ್ದ ಬಂಗಾರದ ಕಿರೀಟವನ್ನು ವಿಧಾನಸೌಧದಲ್ಲಿ ಗುರುವಾರ ಮುಖ್ಯಕಾರ್ಯದರ್ಶಿ ಮೂಲಕ ಸರ್ಕಾರಕ್ಕೆ ಒಪ್ಪಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಮ್ಮ ಹುಟ್ಟೂರು ಕಾರಜೋಳ ಗ್ರಾಮದ ಇಡೀ ಗ್ರಾಮಸ್ಥರು ಅತ್ಯಂತ ಪ್ರೀತಿ ಅಭಿಮಾನದಿಂದ 140 ಗ್ರಾಂ ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು. ತಾವು ಈ ಗ್ರಾಮದ ಅಭಿವೃದ್ಧಿಗಾಗಿ ಸಲ್ಲಿಸಿದ ಗಣನೀಯ ಸೇವೆ, ಗ್ರಾಮದ ಅಭಿವೃದ್ಧಿಗಾಗಿ ಅತ್ತ್ಯುಮ ಯೋಜನೆಗಳ ಅನುಷ್ಠಾನ, ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ, ತಮ್ಮೂರಿನ ಮನೆಯ ಮಗ ಉಪಮುಖ್ಯಮಂತ್ರಿಯಾಗಿದ್ದಕ್ಕಾಗಿ ಪ್ರೀತಿ ಗೌರವದಿಂದ ಈ ಬಂಗಾರದ ಕಿರೀಟವನ್ನು ಸಮರ್ಪಿಸಿದ್ದರು.

ಕಳೆದ 6 ವರ್ಷಗಳಿಂದ ಸನ್ಮಾನ ಮಾಡಿ, ಸಮರ್ಪಿಸಲು ಪ್ರಯತ್ನಿಸಿದ್ದರು. ನವೆಂಬರ್ 23 ರಂದು ಈ ಗ್ರಾಮದಲ್ಲಿ ನಡೆದ ವಿವಿಧ ಅಭಿವೃದ್ದಿ ಕಾರ್ಯಕ್ರಮದಲ್ಲಿ ಒತ್ತಾಯ ಪೂರ್ವಕವಾಗಿ ಅಭಿಮಾನ, ಪ್ರೀತಿ ವಿಶ್ವಾಸ, ಗೌರವದಿಂದ ಸನ್ಮಾನಿಸಿ, ಈ ಚಿನ್ನದ ಕಿರೀಟವನ್ನು ಸಮರ್ಪಿಸಿದ್ದರು.

ADVERTISEMENT

ತಾವು ಶಾಸಕ, ಮಂತ್ರಿಯಾಗಿ ಮಾಡಿದ ಸೇವೆಯನ್ನು ಪರಿಗಣಿಸಿ ಪೀತಿ, ಗೌರವದಿಂದ ಸನ್ಮಾನಿಸಿದ್ದು, ಈ ಸನ್ಮಾನವು ಸರ್ಕಾರಕ್ಕೆ ಸಲ್ಲುತ್ತದೆ. ಈ ಹಿನ್ನೆಲೆಯಲ್ಲಿ ಈ ಬಂಗಾರದ ಕಿರೀಟವನ್ನು ಮುಖ್ಯಕಾರ್ಯದರ್ಶಿ ಟಿ.ಎಂ. ವಿಜಯಬಾಸ್ಕರ್ ಅವರ ಮೂಲಕ ಸರ್ಕಾರಕ್ಕೆ ಒಪ್ಪಿಸಿರುವುದಾಗಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.