ADVERTISEMENT

ಉದ್ಧಟತನದ ಮಾತು ನಿಲ್ಲಿಸಲಿ: ಅಜಿತ್ ಪವಾರ್ ವಿರುದ್ಧ ಡಿಸಿಎಂ ಸವದಿ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2020, 10:09 IST
Last Updated 20 ನವೆಂಬರ್ 2020, 10:09 IST
   

ಕಲಬುರ್ಗಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಉದ್ಧಟತನದ ಮಾತು ನಿಲ್ಲಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ತಾಕೀತು ‌ಮಾಡಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಜಿತ್ ‌ಪವಾರ್ ಅವರು ಇತಿಹಾಸವನ್ನೊಮ್ಮೆ ತೆಗೆದು ನೋಡಬೇಕು. ಅವರ ಮಾತಿನಿಂದಲೇ ಹಿಂದೆ ಅವರ ಸರ್ಕಾರದಲ್ಲಿ ಏನಾಗಿದೆ ಎನ್ನುವುದರ ಆತ್ಮಾವಲೋಕನ ಮಾಡಿಕೊಳ್ಳಲಿ. ಗಡಿ ವಿವಾದ ಮುಗಿದ ಅಧ್ಯಾಯ. ಸೂರ್ಯ ಚಂದ್ರರಿರುವವರೆಗೂ ಬೆಳಗಾವಿ ನಮ್ಮದು ಎಂದು ಸ್ಪಷ್ಟಪಡಿಸಿದರು.

ಸರ್ಕಾರ ಮರಾಠಾ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿರುವುದರಿಂದ ಭಾಷೆ ಮಧ್ಯೆ ಗೊಂದಲ ಆಗಿಲ್ಲ. ಒಂದು ಸಮುದಾಯಕ್ಕೆ ಆರ್ಥಿಕ ಬಲ ತುಂಬುವ ಉದ್ದೇಶದಿಂದ ನಿಗಮ ಮಾಡಲಾಗಿದೆ. ಮರಾಠ ಸಮುದಾಯದವರು ನಮ್ಮ ನೆಲದಲ್ಲಿ ಸಾವಿರಾರು ವರ್ಷಗಳಿಂದ ನೆಲೆಸಿದ್ದಾರೆ. ಆ ಸಮುದಾಯದ ಬಡವರಿಗೆ ಅನುಕೂಲ ಆಗಲು ಈ ಕ್ರಮ ಕೈಗೊಳ್ಳಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದಂತೆ ಮರಾಠಿ ಪ್ರಾಧಿಕಾರದ ರೀತಿ ಅಲ್ಲ. ಎಲ್ಲಾ ಸಮುದಾಯವನ್ನು ಪ್ರೀತಿಸಿದಂತೆ ಮರಾಠ ಸಮುದಾಯವನ್ನೂ ಪ್ರೀತಿಸೋಣ ಎಂದರು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.