ADVERTISEMENT

ಪಕ್ಷ ವಿಷ ಕುಡಿ ಎಂದರೆ ಕುಡಿವೆ: ಡಿಸಿಎಂ ಲಕ್ಷ್ಮಣ ಸವದಿ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2021, 16:41 IST
Last Updated 12 ಫೆಬ್ರುವರಿ 2021, 16:41 IST
ಲಕ್ಷ್ಮಣ ಸವದಿ
ಲಕ್ಷ್ಮಣ ಸವದಿ   

ಬೆಂಗಳೂರು: ‘ಸಿಂದಗಿ ವಿಧಾನಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಾನು ಚಿಂತನೆ ಮಾಡಿಲ್ಲ. ಆದರೆ, ಪಕ್ಷ ಬಯಸಿದರೆ ಬೇರೆ ದಾರಿ ಇರುವುದಿಲ್ಲ. ಪಕ್ಷ ಹೇಳಿದರೆ ನಾನು ವಿಷ ಕುಡಿಯಲೂ ಸಿದ್ಧ’ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದರು.

‘ಸಿಂದಗಿ ಕ್ಷೇತ್ರದಲ್ಲಿ ನಾನು ಸ್ಪರ್ಧಿಸುವ ಬಗ್ಗೆ ಆಲೋಚನೆ ನಡೆಸಿಲ್ಲ. ನಾನು ಪಕ್ಷದ ಶಿಸ್ತಿನ ಸಿಪಾಯಿ ಅಷ್ಟೇ’ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನಿಗೆ ಉತ್ತರಿಸಿದರು.

‘ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ಶಾಸಕರು ಪತ್ರ ಬರೆದಿದ್ದಾರೆ ಎಂಬ ವರದಿಯನ್ನು ಪತ್ರಿಕೆಗಳಲ್ಲಿ ಓದಿದ್ದೇನೆ. ಆದರೆ, ಇದು ಸತ್ಯಕ್ಕೆ ದೂರವಾದ ವರದಿ. ಈ ಸುದ್ದಿ ಬೆಂಗಳೂರಿನಲ್ಲಿ ಮಾತ್ರ ಓಡಾಡುತ್ತಿದೆ. ದೆಹಲಿ ಅಥವಾ ಬೇರೆಲ್ಲೂ ಇಲ್ಲ. ಈ ರೀತಿಯ ಬೆಳವಣಿಗೆಗಳು ನಡೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಸಣ್ಣ ಪುಟ್ಟ ವ್ಯತ್ಯಾಸ ಇದ್ದರೆ ಮುಖ್ಯಮಂತ್ರಿ ಸರಿಪಡಿಸುತ್ತಾರೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಅಧಿಕಾರ ನಡೆಸಲಿದ್ದಾರೆ. ಅಲ್ಲದೇ, ಮುಂದಿನ ಚುನಾವಣೆಯೂ ಅವರ ನೇತೃತ್ವದಲ್ಲೇ ನಡೆಯಲಿದೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.