ADVERTISEMENT

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ಸಮರ್ಥಿಸಿಕೊಂಡ ಡಿಸಿಎಂ ಸವದಿ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2020, 11:24 IST
Last Updated 16 ನವೆಂಬರ್ 2020, 11:24 IST
ಡಿಸಿಎಂ ಲಕ್ಷ್ಮಣ ಸವದಿ
ಡಿಸಿಎಂ ಲಕ್ಷ್ಮಣ ಸವದಿ    

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವುದರಿಂದ ಸಾಮಾಜಿಕ ಸಮಾನತೆಗೆ ಅವಕಾಶವಾಗುತ್ತದೆ, ಈ ಸಮುದಾಯದಲ್ಲಿ ಅತ್ಯಂತ ಬಡವರು ಮತ್ತು ಹಿಂದುಳಿದವರಿದ್ದಾರೆ. ಅವರ ಸಮಗ್ರ ಅಭಿವೃದ್ಧಿಗೆ ಮರಾಠ ಅಭಿವೃದ್ಧಿ ನಿಗಮದಸ್ಥಾಪನೆ ಸೂಕ್ತ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ.

'ಮರಾಠ ಎಂದಾಕ್ಷಣ ಕೇವಲ ಭಾಷೆಯ ಆಧಾರದಲ್ಲಿ ಪರಿಗಣಿಸುವುದು ಸರಿಯಲ್ಲ. ಇದು ಸಮುದಾಯದ ಅಭಿವೃದ್ಧಿಯ ವಿಷಯವಾಗಿರುವುದರಿಂದ ಮತ್ತು ಈ ನಿಗಮವನ್ನು ಸ್ಥಾಪಿಸಬೇಕೆಂದು ಹಲವು ವರ್ಷಗಳಿಂದ ಬೇಡಿಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಅತ್ಯಂತ ಸಮರ್ಪಕವಾಗಿದೆ,'ಎಂದು ಸವದಿ ತಿಳಿಸಿದ್ದಾರೆ.

ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿ ಸ್ಥಾಪಿಸಲುಮನವಿ

ADVERTISEMENT

ವೀರಶೈವ ಲಿಂಗಾಯತರ ಸಮುದಾಯದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಬಡವರು ಮತ್ತು ಹಿಂದುಳಿದವರು ಇದ್ದಾರೆ. ಅವರಿಗೆ ಅನುಕೂಲ ಕಲ್ಪಿಸಲು ಪ್ರತ್ಯೇಕ ವೀರಶೈವ ಲಿಂಗಾಯತರ ಅಭಿವೃದ್ಧಿ ಮಂಡಳಿ ಸ್ಥಾಪಿಸಬೇಕೆಂದು ಲಕ್ಷ್ಮಣ ಸವದಿ ಮುಖ್ಯಮಂತ್ರಿಯನ್ನು ಭೇಟಿಯಾಗಿಮನವಿ ಸಲ್ಲಿಸಿದ್ದಾರೆ.

ಈ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸುವುದರಿಂದ ಸಾಮಾಜಿಕವಾಗಿ, ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಈ ಸಮುದಾಯದ ಬಡವರಿಗೆ ಮತ್ತು ಹಿಂದುಳಿದವರಿಗೆ ಅನುಕೂಲ ಸಿಗಲಿದೆ. ಸಾಮಾಜಿ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಅವರು ಮನವರಿಕೆ ಮಾಡಿಕೊಟ್ಟಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.