ADVERTISEMENT

ನಿವೃತ್ತ ಶಿಕ್ಷಕನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಹಾವೇರಿ DDPI ಅಂದಾನಪ್ಪ

ನಿವೃತ್ತ ಶಿಕ್ಷಕನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಹಾವೇರಿ ಡಿಡಿಪಿಐ ಅಂದಾನಪ್ಪ ಹಾಗೂ ಕ್ಲರ್ಕ್ ದತ್ತಾತ್ರೇಯ ಲೋಕಾಯುಕ್ತ ಬಲೆಗೆ

​ಪ್ರಜಾವಾಣಿ ವಾರ್ತೆ
Published 21 ಜುಲೈ 2023, 16:02 IST
Last Updated 21 ಜುಲೈ 2023, 16:02 IST
ಡಿಡಿಪಿಐ ಅಂದಾನಪ್ಪ ವಡಗೇರಿ ಮತ್ತು ಎಸ್‌ಡಿಎ ದತ್ತಾತ್ರೇಯ ಕುಂಟೆ
ಡಿಡಿಪಿಐ ಅಂದಾನಪ್ಪ ವಡಗೇರಿ ಮತ್ತು ಎಸ್‌ಡಿಎ ದತ್ತಾತ್ರೇಯ ಕುಂಟೆ    

ಹಾವೇರಿ: ನಿವೃತ್ತ ಶಿಕ್ಷಕರೊಬ್ಬರಿಂದ ಲಂಚ ಪಡೆಯುತ್ತಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಹಾಗೂ ದ್ವಿತೀಯ ದರ್ಜೆ ಸಹಾಯಕನನ್ನು ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಶುಕ್ರವಾರ ವಶಕ್ಕೆ ಪಡೆದಿದ್ದಾರೆ. 

ಡಿಡಿಪಿಐ ಅಂದಾನಪ್ಪ ವಡಗೇರಿ ಮತ್ತು ಎಸ್‌ಡಿಎ ದತ್ತಾತ್ರೇಯ ಕುಂಟೆ ಲೋಕಾಯುಕ್ತ ಬಲೆಗೆ ಬಿದ್ದವರು.

ರಟ್ಟೀಹಳ್ಳಿಯ ಸರ್ಕಾರಿ ಉರ್ದು ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮಹಮ್ಮದ್ ಗೌಸ್ ಎಂಬುವರು ತಮ್ಮ ನಿವೃತ್ತಿ ವೇತನ ಸೌಲಭ್ಯ ಪಡೆಯಲು ಅಗತ್ಯ ದಾಖಲಾತಿಗಳನ್ನು ನೀಡಿ ಅದನ್ನು ಸಂಬಂಧಪಟ್ಟ ಇಲಾಖೆಗೆ ಕಳುಹಿಸಲು ಕೋರಿದ್ದರು. ಅದಕ್ಕಾಗಿ ಡಿಡಿಪಿಐ ₹7 ಸಾವಿರ ಲಂಚ ಕೇಳಿದ್ದರು.

ADVERTISEMENT

ಇಬ್ಬರನ್ನೂ ವಶಕ್ಕೆ ಪಡೆಯಲಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗುವುದು ಎಂದು ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.