ADVERTISEMENT

ಲಂಡನ್‌ನಿಂದ ಪ್ರಯಾಣಿಕರೊಂದಿಗೆ ಶವವೂ ಬಂತು!

​ಪ್ರಜಾವಾಣಿ ವಾರ್ತೆ
Published 11 ಮೇ 2020, 19:45 IST
Last Updated 11 ಮೇ 2020, 19:45 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ವಿದೇಶದಿಂದ ಸೋಮವಾರ ಬಂದಿಳಿದ ಪ್ರಯಾಣಿಕರ ಜೊತೆ, ಲಂಡನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರ ಶವವನ್ನೂ ತರಲಾಯಿತು.

‘ಅನಿವಾರ್ಯ ಕಾರಣಗಳಿಂದ ಶವವನ್ನೂ ತರಲಾಗಿದೆ. ಪಾರ್ಥಿವ ಶರೀರವನ್ನು ಸದ್ಯ ಬೆಂಗಳೂರಿನಲ್ಲಿಯೇ ಇಡಲಾಗಿದೆ’ ಎಂದು ಗೃಹ ಇಲಾಖೆ ಕಾರ್ಯದರ್ಶಿ ಉಮೇಶ್‌ಕುಮಾರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ವಿಮಾನ ಇಳಿಯುತ್ತಿದ್ದಂತೆ 27 ವರ್ಷದ ಮಹಿಳೆಯೊಬ್ಬರು ವಾಂತಿ ಮಾಡಿಕೊಂಡಿದ್ದರು. ಮೂರು ತಿಂಗಳು ಗರ್ಭಿಣಿಯಾಗಿದ್ದ ಅವರು ತೀವ್ರವಾಗಿ ಅಸ್ವಸ್ಥರಾಗಿದ್ದರು. ತಕ್ಷಣಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಈಗ ಮಲ್ಲೇಶ್ವರದ ಕೆ.ಸಿ. ಜನರಲ್‌ ಆಸ್ಪತ್ರೆಯಲ್ಲಿ ಅವರನ್ನು ಪತಿಯ ಜೊತೆ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿದೆ’ ಎಂದು ಅವರು ಹೇಳಿದರು.

ADVERTISEMENT

‘ಪ್ರಯಾಣಿಕರಲ್ಲಿ ಕ್ಯಾನ್ಸರ್‌ ರೋಗಿಯೊಬ್ಬರಿದ್ದರು. ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ. ಸದ್ಯಕ್ಕೆ ಯಾವ ಪ್ರಯಾಣಿಕರಿಗೂ ಕೋವಿಡ್‌–19 ಲಕ್ಷಣ ಕಂಡು ಬಂದಿಲ್ಲ’ ಎಂದು ಅವರು ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.