ADVERTISEMENT

ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ ಶೇ 24.50ಕ್ಕೆ ಏರಿಕೆ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2021, 9:15 IST
Last Updated 27 ಅಕ್ಟೋಬರ್ 2021, 9:15 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಜುಲೈ 1 ರಿಂದ ಪೂರ್ವಾನ್ವಯ ಆಗುವಂತೆ ತುಟ್ಟಿಭತ್ಯೆಯನ್ನು ಶೇ 3 ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ನೌಕರನ ಮೂಲವೇತನದ ಶೇ 21.50 ರಷ್ಟಿದ್ದ ತುಟ್ಟಿಭತ್ಯೆ ಯನ್ನು ಶೇ 24.50 ಗೆ ಏರಿಸಲಾಗಿದೆ.

ಕೇಂದ್ರ ಸರ್ಕಾರದ ನೌಕರರಿಗೆ ತುಟ್ಟಿಭತ್ಯೆಯನ್ನು ಮೂಲವೇತನದ ಶೇಕಡ 31ರಷ್ಟಕ್ಕೆ2021ರ ಜುಲೈ 1ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಹೆಚ್ಚಿಸಿದೆ.

ತುಟ್ಟಿಭತ್ಯೆಯು ಮೂಲವೇತನದ ಶೇ 28ರಷ್ಟರಿಂದ, ಶೇ 31ಕ್ಕೆ ಹೆಚ್ಚಳ ಆಗಲಿದೆ. ಸಶಸ್ತ್ರ ಪಡೆಗಳ ಸಿಬ್ಬಂದಿ ಹಾಗೂ ರೈಲ್ವೆ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಆದೇಶವನ್ನು ಸಂಬಂಧ‍ಪಟ್ಟ ಸಚಿವಾಲಯಗಳು ಹೊರಡಿಸಲಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.