ADVERTISEMENT

ಆಶಾ ಕಾರ್ಯಕರ್ತೆ ಸಾವು: ಪರಿಹಾರಕ್ಕೆ ಆಗ್ರಹ

ಶವಾಗಾರದ ಮುಂದೆ ಮೃತಳ ಕುಟುಂಬಸ್ಥರಿಂದ ಧರಣಿ

​ಪ್ರಜಾವಾಣಿ ವಾರ್ತೆ
Published 12 ಮೇ 2020, 20:00 IST
Last Updated 12 ಮೇ 2020, 20:00 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬಳ್ಳಾರಿ: ಜಿಲ್ಲೆಯ ಕುರುಗೋಡು ತಾಲ್ಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಭಾನುವಾರ ಮೃತಪಟ್ಟ ಆಶಾ ಕಾರ್ಯಕರ್ತೆ ಸಾಕಮ್ಮ ಅವರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಪಡಿಸಿಮೃತ ಕುಟುಂಬದ ಸದಸ್ಯರು, ಬೀದಿ ಬದಿ ವ್ಯಾಪಾರಿಗಳು ಪ್ರತಿಭಟಿಸಿದರು.

ರಾಷ್ಟ್ರೀಯ ವಿಪತ್ತು ಕಾಯ್ದೆಯಡಿ ಪರಿಹಾರ ನೀಡಬೇಕು ಮತ್ತು ಕುಟುಂಬದ ಒಬ್ಬರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಿದರು. ಪ್ರಾಂತ ರೈತ ಸಂಘ ಮತ್ತು ಬೀದಿಬದಿ ವ್ಯಾಪಾರಿಗಳ ಮಹಾಮಂಡಳಿ ಸದಸ್ಯರು ಮಂಗಳವಾರ ನಡೆದ ಪ್ರತಿಭಟನೆಯಲ್ಲಿದ್ದರು. ವಿಮ್ಸ್ ಆಸ್ಪತ್ರೆಯ ಶವಾಗಾರದ ಮುಂದೆ ಪ್ರತಿಭಟಿಸಿದ ಬಳಿಕ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.ಸಾಕಮ್ಮ ಕೊರೊನಾ ವೈರಸ್ ನಿಯಂತ್ರಣ ಕಾರ್ಯದಲ್ಲಿ ಜೀವದ ಹಂಗು ತೊರೆದು ಕಾರ್ಯನಿರ್ವಹಿಸಿದ್ದಾರೆ. ಮೂರು ತಿಂಗಳ ಕೆಲಸದ ಒತ್ತಡ, ಅನಾರೋಗ್ಯದಿಂದ ಸತ್ತಿದ್ದಾರೆ. ₹10 ಲಕ್ಷ ಪರಿಹಾರ ನೀಡಬೇಕು ಎಂದುಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿ.ಎಸ್. ಶಿವಶಂಕರ್ ಒತ್ತಾಯಿಸಿದರು.

ಬೇಡಿಕೆ ಈಡೇರಿಸುವವರೆಗೆ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದ ಕುಟುಂಬದವರು ಪಟ್ಟು ಹಿಡಿದಿದ್ದರಿಂದ ಶವ ಅಲ್ಲೇ ಉಳಿಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.