ADVERTISEMENT

ನದಿಯಲ್ಲಿ ಮುಳುಗಿ ಇಬ್ಬರ ಸಾವು

​ಪ್ರಜಾವಾಣಿ ವಾರ್ತೆ
Published 28 ಜುಲೈ 2021, 19:31 IST
Last Updated 28 ಜುಲೈ 2021, 19:31 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಮುದ್ದೇಬಿಹಾಳ (ವಿಜಯಪುರ): ದನ ಮೇಯಿಸಲೆಂದು ಹೋಗಿದ್ದ ಶಾಂತಮ್ಮ ಭೀಮನಗೌಡ ನಾಗೋಡ (20) ಹಾಗೂ ಗುರುಸಂಗಮ್ಮ ಭೀಮಪ್ಪ ಮುದೂರ (8) ಎಂಬುವವರು ತಾಲ್ಲೂಕಿನ ಹುನಕುಂಟಿ ಗ್ರಾಮದಲ್ಲಿ ಕೃಷ್ಣಾ ನದಿಯಲ್ಲಿ ಬುಧವಾರ ಮುಳುಗಿ ಸಾವನ್ನಪ್ಪಿದ್ದಾರೆ.

ದನಗಳಿಗೆ ನೀರು ಕುಡಿಸುವ ವೇಳೆ ಹೊಳೆಯಲ್ಲಿಯೇ ಇದ್ದ ಆಳವಾದ ಕಂದಕಕ್ಕೆ ಮೊದಲು ಗುರುಸಂಗಮ್ಮ ಬಿದ್ದಿದ್ದಾಳೆ. ಅವಳನ್ನು ರಕ್ಷಿಸಲು ಹೋದ ಶಾಂತಮ್ಮ ಸಹ ಮುಳಗಿ ಪ್ರಾಣ ಕಳೆದುಕೊಂಡಿದ್ದಾರೆ.

ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

4 ಲಕ್ಷ ಕ್ಯುಸೆಕ್ ನೀರು ಹೊರಕ್ಕೆ: ಆಲಮಟ್ಟಿ ಜಲಾಶಯದಿಂದ ಬುಧವಾರ 4 ಲಕ್ಷ ಕ್ಯುಸೆಕ್ ನೀರನ್ನು ಹೊರ ಬಿಡಲಾಗಿದ್ದು ಗುರುವಾರ ಈ ಪ್ರಮಾಣ ಇನ್ನಷ್ಟು ಹೆಚ್ಚಲಿದೆ.

ಈ ಬಗ್ಗೆ ಕೃಷ್ಣಾ ತೀರದ ಗ್ರಾಮಗಳಲ್ಲಿ ಡಂಗೂರ ಸಾರಲಾಗಿದ್ದು, ತೀವ್ರಕಟ್ಟೆಚ್ಚರದಿಂದ ಇರಲುಸೂಚಿಸಲಾಗಿದೆ. ಈಗಾಗಲೇ
ತಾಲ್ಲೂಕಿನ ಕೃಷ್ಣಾ ತೀರದ 100 ಎಕರೆಗೂ ಅಧಿಕ ಪ್ರದೇಶದಲ್ಲಿ ಬೆಳೆದ ಕಬ್ಬು, ಬಾಳೆ, ಸೂರ್ಯಕಾಂತಿ ಸೇರಿದಂತೆ ಹಲವು ಬೆಳೆಗಳು ಜಲಾವೃತಗೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.