ADVERTISEMENT

ಆಸ್ತಿ ತೆರಿಗೆ ಪರಿಷ್ಕರಣೆಗೆ ಸಂಪುಟ ಸಭೆಯಲ್ಲಿ ನಿರ್ಧಾರ

​ಪ್ರಜಾವಾಣಿ ವಾರ್ತೆ
Published 13 ಜನವರಿ 2021, 8:05 IST
Last Updated 13 ಜನವರಿ 2021, 8:05 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ ರಾಜ್ಯದ ಎಲ್ಲ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಗಳಲ್ಲಿ ಆಸ್ತಿ ತೆರಿಗೆ ಹೆಚ್ಚಳ ಮಾಡಲು ಮಂಗಳವಾರ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕಟ್ಟಡಗಳ ಮೌಲ್ಯದ ಶೇಕಡ 0.5ರಷ್ಟಿದ್ದ ತೆರಿಗೆ ಪ್ರಮಾಣವನ್ನು ಶೇ 1.5ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಇದರಿಂದ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಆದಾಯ ಸಂಗ್ರಹದಲ್ಲಿ ಹೆಚ್ಚಳವಾಗಲಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ತಿಳಿಸಿದರು.

ಈವರೆಗೆ ಖಾಲಿ ನಿವೇಶನಗಳಿಗೆ ತೆರಿಗೆ ವಿಧಿಸುತ್ತಿರಲಿಲ್ಲ. ಮುಂದೆ 1,000 ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಖಾಲಿ ನಿವೇಶನಗಳಿಗೆ ತೆರಿಗೆ ವಿಧಿಸಲು ನಿರ್ಧರಿಸಲಾಗಿದೆ ಎಂದರು.

ADVERTISEMENT

ಆಸ್ತಿ ತೆರಿಗೆ ಪರಿಷ್ಕರಣೆಗೆ ಪೂರಕವಾಗಿ ಕರ್ನಾಟಕ ನಗರಾಡಳಿತ ಕಾಯ್ದೆಗೆ ತಿದ್ದುಪಡಿ ತರುವಂತೆ ಕೇಂದ್ರ ಸರ್ಕಾರ ಸೂಚಿಸಿತ್ತು. ಕಾಯ್ದೆಗೆ ತಿದ್ದುಪಡಿ ತರುವ ಪ್ರಸ್ತಾವಕ್ಕೆ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.