
ಪ್ರಜಾವಾಣಿ ವಾರ್ತೆ
ಹೊಸಪೇಟೆ: ‘ಹಂಪಿ ಉತ್ಸವ ನಡೆಸಬೇಕೇ ಅಥವಾ ಬೇಡವೇ ಎನ್ನುವುದರ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಿದ ನಂತರವಷ್ಟೇ ತೀರ್ಮಾನಕ್ಕೆ ಬರಲಾಗುವುದು’ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದರು.
‘ಮೈಸೂರು ದಸರಾ ಆಚರಿಸಲಾಗುತ್ತಿದೆ. ಹೀಗಿರುವಾಗ ಹಂಪಿ ಉತ್ಸವವೇಕೇ ಮಾಡಬಾರದು ಎಂಬ ಪ್ರಶ್ನೆಗಳನ್ನು ಕೆಲವರು ಕೇಳಿದ್ದಾರೆ.
ಅಲ್ಲದೇ ಕೊರೊನಾ ಸೋಂಕು ಹರಡುತ್ತಿರುವುದರಿಂದ ಅದ್ದೂರಿ ಉತ್ಸವ ಮಾಡಲು ಬರುವುದಿಲ್ಲ. ಒಂದುವೇಳೆ ಉತ್ಸವ ಮಾಡುವುದರ ಬಗ್ಗೆ ತೀರ್ಮಾನಕ್ಕೆ ಬಂದರೆ ಸರಳ ರೀತಿಯಲ್ಲಿ ಆಚರಿಸಲಾಗುವುದು’ ಎಂದು ಶುಕ್ರವಾರ ಸಂಜೆ ನಗರದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.