ADVERTISEMENT

ಸಂಪುಟ ವಿಸ್ತರಣೆ ಬಗ್ಗೆ ಎರಡು ದಿನಗಳಲ್ಲಿ ತೀರ್ಮಾನ: ಬಿ.ಎಸ್. ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 7 ಜನವರಿ 2023, 9:38 IST
Last Updated 7 ಜನವರಿ 2023, 9:38 IST
   

ಶಿಕಾರಿಪುರ: ರಾಜ್ಯದಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಎರಡು-ಮೂರು ದಿನಗಳಲ್ಲಿ ಕೇಂದ್ರದ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪಟ್ಟಣದಲ್ಲಿ ಶನಿವಾರ ಬಿಜೆಪಿ ಬೂತ್ ವಿಜಯ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅವರು, ಸುದ್ದಿಗಾರರೊಂದಿಗೆ ಮಾತನಾಡಿದರು.

’ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ನಾಯಕರು ತೀರ್ಮಾನ ತೆಗೆದುಕೊಳ್ಳುತ್ತಾರೆ. ಚುನಾವಣೆಯಲ್ಲಿ ಬಿಜೆಪಿ 150 ಕ್ಷೇತ್ರದಲ್ಲಿ ಗೆಲುವು ಸಾಧಿಸುವುದನ್ನು ತಡೆಯಲು ಯಾರಿಂದಲೂ ಸಾಧ್ಯವಾಗುವುದಿಲ್ಲ. ಕಾಂಗ್ರೆಸ್‌ನ ಕೆಲವು ನಾಯಕರು ತಾವೇ ಮುಖ್ಯಮಂತ್ರಿ ಎಂದು ಬಡಿದಾಡುತ್ತಿದ್ದಾರೆ. ಅದು ಕೇವಲ ತಿರುಕನ ಕನಸು ಹೊರತು ಸಾಧ್ಯವಿಲ್ಲ ಎಂಬುದು ಅವರಿಗೂ ಮನವರಿಕೆಯಾಗಿದೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಜಯಭೇರಿ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ‘ ಎಂದರು.

ADVERTISEMENT

‘ತಾವು ನಿಂತಿರುವ ನೆಲ ಕುಸಿಯುತ್ತಿದೆ ಎಂಬುದರ ಬಗ್ಗೆ ಅರಿವಿಲ್ಲದೇ ಸಿದ್ದರಾಮಯ್ಯ, ಮುಖ್ಯಮಂತ್ರಿ ಹಾಗೂ ಬೇರೆಯವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಅವರ ಹಗುರ ಮಾತುಗಳಿಗೆ ಚುನಾವಣೆಯಲ್ಲಿ ಮತದಾರರು ತಕ್ಕ ಉತ್ತರ ನೀಡುತ್ತಾರೆ‘ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.