ಬೆಂಗಳೂರು: ಪತ್ರಕರ್ತ ದೀಪಕ್ ತಿಮ್ಮಯ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.
ಬಳಿಕ ಮಾತನಾಡಿದ ಶಿವಕುಮಾರ್, ‘ಕಾಂಗ್ರೆಸ್ ಪಕ್ಷಕ್ಕೆ ಸೀಮಿತವಾಗಿ ಕೆಪಿಸಿಸಿ ಅಧ್ಯಕ್ಷರ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿಯಾಗಿ ದೀಪಕ್ ತಿಮ್ಮಯ ಅವರನ್ನು ನೇಮಿಸಲಾಗಿದೆ. ಉಪ ಮುಖ್ಯಮಂತ್ರಿಗೆ ಪ್ರತ್ಯೇಕ ರಾಜಕೀಯ ಹಾಗೂ ಸಂವಹನ ಕಾರ್ಯದರ್ಶಿ ಇರಲಿದ್ದಾರೆ. ದೀಪಕ್ ತಿಮ್ಮಯ ಅವರಿಗೆ ಕಾಂಗ್ರೆಸ್ ಭವನದಲ್ಲಿ ಕಚೇರಿ ನೀಡಲಾಗುವುದು’ ಎಂದರು.
‘ಮಾಧ್ಯಮ ಕ್ಷೇತ್ರದಲ್ಲಿ ಸುಮಾರು 30-40 ವರ್ಷಗಳ ಅನುಭವವಿರುವ ದೀಪಕ್ ತಿಮ್ಮಯ, ತಮ್ಮದೇ ಆದ ಸಂಸ್ಥೆ ಮೂಲಕ ಮಕ್ಕಳನ್ನು ನಾಯಕರನ್ನಾಗಿ ರೂಪಿಸುವ ಕೆಲಸ ಮಾಡಿಕೊಂಡು ಬಂದಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ತತ್ವ, ಸಿದ್ಧಾಂತ, ವಿಚಾರವಾಗಿ ಅವರು ಅನೇಕ ಉತ್ತಮ ಸಲಹೆಗಳನ್ನು ನೀಡಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಭಾಗವಾಗುವಂತೆ ಅವರಿಗೆ ಮನವಿ ಮಾಡಿದ್ದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.