ADVERTISEMENT

ದೀಪಾವಳಿ: ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡಿದರೆ ಪರವಾನಗಿ ರದ್ದು–ಶ್ರೀರಾಮುಲು

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2022, 13:22 IST
Last Updated 22 ಅಕ್ಟೋಬರ್ 2022, 13:22 IST
ಶ್ರೀರಾಮುಲು
ಶ್ರೀರಾಮುಲು   

ಬಳ್ಳಾರಿ: ‘ಹಬ್ಬದ ನೆಪದಲ್ಲಿ ಖಾಸಗಿ ಬಸ್‌ಗಳು ಸೇರಿದಂತೆ ಇತರೆ ಪ್ರಯಾಣಿಕರ ವಾಹನಗಳು ಪ್ರಯಾಣಿಕರಿಂದ ಹೆಚ್ಚು ಹಣ ವಸೂಲಿ ಮಾಡಿದರೆ ಅವರ ಪರವಾನಗಿ ರದ್ದುಪಡಿಸಲಾಗುವುದು’ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ಎಚ್ಚರಿಕೆ ನೀಡಿದರು.

ಖಾಸಗಿಯವರು ಯಾವುದೇ ಕಾರಣಕ್ಕೂ ಹೆಚ್ಚಿಗೆ ಪ್ರಯಾಣ ಶುಲ್ಕ ಪಡೆಯುವಂತಿಲ್ಲ. ಇದರ ಮೇಲೆ ನಿಗಾ ಇಡಲು ಟಾಸ್ಕ್‌ಫೋರ್ಸ್‌ ರಚಿಸಲಾಗಿದೆ ಎಂದು ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ನವೆಂಬರ್‌ 20ರಂದು ಬಳ್ಳಾರಿಯಲ್ಲಿ‌ ರಾಜ್ಯ ಬಿಜೆಪಿ ಎಸ್ಟಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದವರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಬಳ್ಳಾರಿಯಲ್ಲಿ ಸಮಾವೇಶ ಆಯೋಜಿಸಲಾಗಿದೆ.

ADVERTISEMENT

ಪಕ್ಷದ ರಾಷ್ಟ್ರೀಯ ನಾಯಕರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳುವರು. ಸಮಾವೇಶದಿಂದ ಬಿಜೆಪಿಗೆ ರಾಜಕೀಯವಾಗಿ ಅನುಕೂಲವಾಗಲಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.