ADVERTISEMENT

Defamation Case: ಶಾಸಕ ವಿ.ಸುನಿಲ್‌ ಕುಮಾರ್ ಆರೋಪ ಮುಕ್ತ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2025, 16:43 IST
Last Updated 13 ಆಗಸ್ಟ್ 2025, 16:43 IST
ವಿ.ಸುನಿಲ್‌ ಕುಮಾರ್‌
ವಿ.ಸುನಿಲ್‌ ಕುಮಾರ್‌   

ಬೆಂಗಳೂರು: ಮಾನನಷ್ಟ ಆರೋಪ ಪ್ರಕರಣದಲ್ಲಿ ಶಾಸಕ ವಿ.ಸುನಿಲ್‌ ಕುಮಾರ್ ಅವರನ್ನು ಜನಪ್ರತಿನಿಧಿಗಳ ವಿಶೇಷ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಅಪರಾಧ ಮುಕ್ತಗೊಳಿಸಿ ಆದೇಶಿಸಿದೆ.

ಸುನಿಲ್‌ ಕುಮಾರ್ ವಿರುದ್ಧ ‘ಶ್ರೀರಾಮ ಸೇನೆ’ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್‌ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಿಚಾರಣೆ ನಡೆಸಿದ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಈ ಕುರಿತಂತೆ ಆದೇಶಿಸಿದೆ. ಸುನಿಲ್‌ ಕುಮಾರ್ ಪರ ಹೈಕೋರ್ಟ್‌ ವಕೀಲ ಬಿ.ವಿನೋದ್ ಕುಮಾರ್ ವಾದ ಮಂಡಿಸಿದ್ದರು.

ಪ್ರಕರಣವೇನು?: ಕಾರ್ಕಳ ವಿಧಾನಸಭಾ ಕ್ಷೇತ್ರಕ್ಕೆ 2023ರಲ್ಲಿ ನಡೆದಿದ್ದ ಚುನಾವಣೆಯಲ್ಲಿ ವಿ.ಸುನಿಲ್ ಕುಮಾರ್ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.

ADVERTISEMENT

ಅಂದು ತಮ್ಮ ಗೆಲುವಿನ ವಿಜಯೋತ್ಸವ ಆಚರಿಸುವಾಗ ಸುನಿಲ್‌ ಕುಮಾರ್‌ ಭಾಷಣ ಮಾಡಿದ್ದರು. ಈ ಭಾಷಣದಲ್ಲಿ ‘ನನ್ನ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಫರ್ಧಿಸಿದ್ದ ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್. ಹಣ ಪಡೆದು ಸ್ಪರ್ಧೆ ಮಾಡುತ್ತಾರೆ ಎಂಬ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಪ್ರಮೋದ್‌ ಮುತಾಲಿಕ್‌ ಖಾಸಗಿ ದೂರು ಸಲ್ಲಿಸಿ ಮಾನನಷ್ಟ ಮೊಕದ್ದಮೆ ಹೂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.