ADVERTISEMENT

ಪದವಿ ಕಾಲೇಜುಗಳ ಶುಲ್ಕ ಶೇ 5ರಷ್ಟು ಹೆಚ್ಚಳ: ಕಾಲೇಜು ಶಿಕ್ಷಣ ಇಲಾಖೆ ಅನುಮತಿ

​ಪ್ರಜಾವಾಣಿ ವಾರ್ತೆ
Published 20 ಮೇ 2025, 15:41 IST
Last Updated 20 ಮೇ 2025, 15:41 IST
   

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ವಿವಿಧ ಕೋರ್ಸ್‌ಗಳ ಶುಲ್ಕವನ್ನು 2025–26ನೇ ಸಾಲಿಗೆ ಶೇ 5ರಷ್ಟು ಹೆಚ್ಚಳ ಮಾಡಲು ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ. 

ಕಲಾ, ವಾಣಿಜ್ಯ, ವಿಜ್ಞಾನ ಮತ್ತು ಕಾನೂನು ಕೋರ್ಸ್‌ಗಳಿಗೆ ಪ್ರಾಂಶುಪಾಲರು ತಮ್ಮ ಕಾಲೇಜುಗಳ ಮಟ್ಟದಲ್ಲಿ ಶುಲ್ಕವನ್ನು ಹೆಚ್ಚಿಸಿಕೊಳ್ಳಬಹುದು. ಹೆಚ್ಚಳದಿಂದ ಸಂಗ್ರಹವಾದ ಮೊತ್ತವನ್ನು ಸರ್ಕಾರಕ್ಕೆ ಜಮೆ ಮಾಡದೆ, ಕಾಲೇಜುಗಳ ಖಾತೆಯಲ್ಲೇ ಇಟ್ಟುಕೊಂಡು ಚಟುವಟಿಕೆಗಳಿಗೆ ಬಳಸಿಕೊಳ್ಳಬಹುದು ಎಂದು ಸುತ್ತೋಲೆಯಲ್ಲಿ ವಿವರಿಸಲಾಗಿದೆ.  

‘ಸರ್ಕಾರಿ ಕಾಲೇಜುಗಳಲ್ಲಿ ಕೋವಿಡ್‌ ಆರಂಭಕ್ಕೂ ಮೊದಲು ಹೆಚ್ಚಳ ಮಾಡಲಾಗಿತ್ತು. ಐದು ವರ್ಷಗಳ ನಂತರ ಶೇ 5ರಷ್ಟು ಹೆಚ್ಚಳಕ್ಕೆ ಅನುಮತಿ ನೀಡಲಾಗಿದೆ. ಶೇ 5ರಷ್ಟು ಹೆಚ್ಚಳ ಮಾಡಿದರೂ ಒಟ್ಟಾರೆ ಶುಲ್ಕ ₹500 ಮೀರುವುದಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ವ್ಯವಸ್ಥೆ ಇದೆ’ ಎಂದು ಕಾಲೇಜು ಶಿಕ್ಷಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. 

ADVERTISEMENT

ಸರ್ಕಾರವು ಆರೋಗ್ಯ ಪರೀಕ್ಷೆಗಾಗಿ ಪ್ರತಿ ವಿದ್ಯಾರ್ಥಿಯಿಂದ ₹32 ಸಂಗ್ರಹಿಸುತ್ತಿದ್ದು, ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯನ್ನು ಕಡ್ಡಾಯವಾಗಿ ನಡೆಸಿ, ಇಲಾಖೆಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.