ADVERTISEMENT

ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರ ಮುಂದುವರಿಕೆಗೆ ಆರ್ಥಿಕ ಇಲಾಖೆ ಒಪ್ಪಿಗೆ

ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2021, 18:30 IST
Last Updated 8 ಫೆಬ್ರುವರಿ 2021, 18:30 IST
ವಿಧಾನಸೌಧ
ವಿಧಾನಸೌಧ    

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 7,091 ಅತಿಥಿ ಉಪನ್ಯಾಸಕರ ಮುಂದುವರಿಕೆಗೆ ಆರ್ಥಿಕ ಇಲಾಖೆಯು ಸೋಮವಾರ ಅನುಮತಿ ನೀಡಿದೆ.

14,813 ಅತಿಥಿ ಉಪನ್ಯಾಸಕರ ಸೇವೆ ಮುಂದುವರಿಸಲು ಕಾಲೇಜು ಶಿಕ್ಷಣ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು. ಈ ಪೈಕಿ ಶೇ 50ರಷ್ಟು ಉಪನ್ಯಾಸಕರ ನಿಯೋಜನೆಗೆ ಮಾತ್ರ ಅನುಮತಿ ದೊರೆತಿದೆ.

ಇನ್ನು ಒಂದು ತಿಂಗಳ ಅವಧಿಗೆ ಮಾತ್ರ (ಮಾರ್ಚ್‌) ಸೇವೆ ಮುಂದುವರಿಸಲಾಗುವುದು ಎಂದು ಇಲಾಖೆ ಹೇಳಿದೆ.

ADVERTISEMENT

ಕಾಲೇಜುಗಳಲ್ಲಿ ಬೋಧಕರ ಕೊರತೆ ನೀಗಲು ಕ್ರಮ ಕೈಗೊಳ್ಳಬೇಕು ಎಂದು ಸೋಮವಾರ ‘ಪ್ರಜಾವಾಣಿ’ ಸಂಪಾದಕೀಯದಲ್ಲಿ ಆಗ್ರಹಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.