ADVERTISEMENT

‘ಪದವಿ ಕಾಲೇಜುಗಳ ಶೇ 75 ವಿದ್ಯಾರ್ಥಿಗಳಿಗೆ ಲಸಿಕೆ’

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 19:24 IST
Last Updated 21 ಜುಲೈ 2021, 19:24 IST
ಡಾ.ಸಿ.ಎನ್. ಅಶ್ವತ್ಥನಾರಾಯಣ
ಡಾ.ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: ‘ರಾಜ್ಯದಲ್ಲಿ ಇದೇ 26ರಿಂದ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭವಾಗುತ್ತಿದ್ದು, ಈವರೆಗೆ ಉನ್ನತ ಶಿಕ್ಷಣ ವಿಭಾಗದ ಶೇ.75ರಷ್ಟು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ’ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆದ ಉಪಮಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಲಸಿಕೆ ವಿತರಣೆ ಕಾರ್ಯಕ್ರಮ ವೇಗವಾಗಿ ಸಾಗುತ್ತಿದೆ. ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18 ವರ್ಷಕ್ಕೂ ಮೇಲ್ಪಟ್ಟ ಎಲ್ಲ ವಿದ್ಯಾರ್ಥಿಗಳಿಗೆ ಲಸಿಕೆ ಕೊಡಲಾಗುತ್ತಿದೆ. ಜತೆಗೆ, ಬೋಧಕರು, ಬೋಧಕೇತರ ಸಿಬ್ಬಂದಿಗೂ ಲಸಿಕೆ ಹಾಕಿಸಲಾಗುತ್ತಿದೆ’ ಎಂದು ಹೇಳಿದರು.

‘ಭೌತಿಕ ತರಗತಿಗಳಿಗೆ ಹಾಜರಾಗ ಬಯಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಮೊದಲ ಡೋಸ್‌ ಲಸಿಕೆ ಪಡೆದಿರಲೇಬೇಕು‘ ಎಂದೂ ಅವರು ಸ್ಪಷ್ಟಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.