ADVERTISEMENT

ಪಿಯುಸಿ ನೇಮಕಾತಿ ಪತ್ರ ನೀಡಲು ವಿಳಂಬ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಅಕ್ಟೋಬರ್ 2020, 12:53 IST
Last Updated 12 ಅಕ್ಟೋಬರ್ 2020, 12:53 IST
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ   

ಬೆಂಗಳೂರು: ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆ ಮುಗಿದು ಎರಡು ತಿಂಗಳು ಕಳೆದರೂ ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡದಿರುವ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ನೇಮಕಾತಿ ಪತ್ರ ದೊರೆಯದ ಹಿನ್ನೆಲೆಯಲ್ಲಿ ನೂರಾರು ಅಭ್ಯರ್ಥಿಗಳು ಬೆಂಗಳೂರಿನ ಪಿಯುಸಿ ಮಂಡಳಿ ಎದುರು ಪ್ರತಿಭಟನೆಗೆ ಕುಳಿತಿದ್ದಾರೆ.

ಈ ಹಿನ್ನೆಲೆಯಲ್ಲಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, 'ಪಿಯುಸಿ ನೇಮಕಾತಿ ಪ್ರಕ್ರಿಯೆ ಮುಗಿದ ಮೇಲೆಯೂ ನೇಮಕಾತಿ ಪತ್ರ ದೊರೆಯದೇ ಈ ದಿನ ಮಳೆಯಲ್ಲಿಯೇ ಪಿಯುಸಿ ಮಂಡಳಿಯ ಎದುರು ಕೂತಿದ್ದಾರೆ. ಈಗಲಾದರೂ ಕಣ್ತೆರೆಯಿರಿ. ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ನೀಡಿ ಅವರ ಆತಂಕವನ್ನು ದೂರ ಮಾಡಿ' ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ಟ್ಯಾಗ್‌ ಮಾಡುವ ಮೂಲಕ ಒತ್ತಾಯಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.