
ಪ್ರಜಾವಾಣಿ ವಾರ್ತೆಸಿದ್ದರಾಮಯ್ಯ
ಮೈಸೂರು: ‘ನವದೆಹಲಿಯಲ್ಲಿ ಸ್ಫೋಟ ಸಂಭವಿಸಿರುವುದರಿಂದಾಗಿ ರಾಜ್ಯದಾದ್ಯಂತ ಅಲರ್ಟ್ ಘೋಷಿಸಿದ್ದೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಲ್ಲಿ ಸೋಮವಾರ ರಾತ್ರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಮೈಸೂರು, ಬೆಂಗಳೂರು ಪೊಲೀಸ್ ಹಿರಿಯ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ. ಇಡೀ ರಾಜ್ಯದಲ್ಲಿ ಭದ್ರತೆ ಬಿಗಿಗೊಳಿಸುವ ಕೆಲಸ ಮಾಡುತ್ತೇವೆ. ವಿಮಾನನಿಲ್ದಾಣ, ರೈಲು ನಿಲ್ದಾಣಗಳಲ್ಲಿ ಭದ್ರತೆ ಬಿಗಿಗೊಳಿಸಲು ಸೂಚಿಸಿದ್ದೇನೆ’ ಎಂದರು.
‘ಸ್ಫೋಟದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.