

ನವದೆಹಲಿ: ದೆಹಲಿ ಕರ್ನಾಟಕ ಸಂಘ ಕೊಡಮಾಡುವ 2024 ಹಾಗೂ 2025 ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಇಂದು ಘೋಷಣೆ ಮಾಡಲಾಗಿದೆ.
ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಸಿ.ಎಂ. ನಾಗರಾಜು ಅವರು ಈ ಮಾಹಿತಿ ಹಂಚಿಕೊಂಡಿದ್ದಾರೆ.
ರಾಷ್ಟ್ರಕವಿ ಕುವೆಂಪು ಪ್ರಶಸ್ತಿಗೆ ಹಂಪಾ ನಾಗರಾಜಯ್ಯ ಹಾಗೂ ಪ್ರಧಾನ್ ಗುರುದತ್ ಆಯ್ಕೆಯಾಗಿದ್ದಾರೆ.
ಶಿವರಾಮ ಕಾರಂತ ಪ್ರಶಸ್ತಿಗೆ ಕೆರೆಮನೆ ಶಿವಾನಂದ ಹೆಗಡೆ ಹಾಗೂ ಸತೀಶ್ ಪಟ್ಲ ಆಯ್ಕೆಯಾಗಿದ್ದಾರೆ.
ಸರೋಜಿನಿ ಮಹಿಷಿ ಪ್ರಶಸ್ತಿಗೆ ಬಿ.ಆರ್. ಲಕ್ಷ್ಮಣರಾವ್ ಹಾಗೂ ಲತಾ ರಾಜಶೇಖರ್ ಆಯ್ಕೆಯಾಗಿದ್ದಾರೆ.
ದೆಹಲಿ ಕರ್ನಾಟಕ ಸಂಘದ ಕನ್ನಡ ಭಾರತಿ ರಂಗ ಪ್ರಶಸ್ತಿಗೆ ಟಿ.ಎಸ್. ನಾಗಾಭರಣ ಹಾಗೂ ಚರಣ್ ರಾಜ್ ಆಯ್ಕೆಯಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.