
ಬೆಂಗಳೂರು: ‘ದೆಹಲಿಯಲ್ಲಿ ಬುಧವಾರ (ಆಗಸ್ಟ್ 2) ನಡೆಯಲಿರುವ ಸಭೆಗೆ ಸಚಿವರಿಗಷ್ಟೇ ಆಹ್ವಾನ ನೀಡಿದ್ದಲ್ಲ. ಕೆಲವು ಶಾಸಕರು, ಸಂಸದರು, ಪಕ್ಷದ ಹಿರಿಯ ಮುಖಂಡರೂ ಸೇರಿದಂತೆ 50 ನಾಯಕರನ್ನು ಮೂರು ತಂಡಗಳಂತೆ ಆಹ್ವಾನಿಸಲಾಗಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮುಂಬರುವ ಲೋಕಸಭೆ ಚುನಾವಣೆಯ ತಂತ್ರಗಾರಿಕೆ ಕುರಿತು ಚರ್ಚೆ ಮಾಡುವ ಉದ್ದೇಶದಿಂದ ಸಚಿವರು, ಶಾಸಕರು ಮತ್ತು ಇತರ ನಾಯಕರು ದೆಹಲಿ ಪ್ರವಾಸ ಮಾಡುತ್ತಿದ್ದೇವೆ’ ಎಂದರು.
‘ಪಕ್ಷ ಸಂಘಟನೆ, ಲೋಕಸಭೆ ಚುನಾವಣೆಗೆ ತಂತ್ರಗಾರಿಕೆ, ಜವಾಬ್ದಾರಿಗಳ ಹಂಚಿಕೆ ಕುರಿತು ಚರ್ಚಿಸಲು ಹೈಕಮಾಂಡ್ ನಾಯಕರು ದೆಹಲಿಯಲ್ಲಿ ಸಭೆ ಕರೆದಿದ್ದಾರೆ. ಜೊತೆಗೆ, ಜನರಿಗೆ ನಮ್ಮ ಎಲ್ಲ ಗ್ಯಾರಂಟಿಗಳನ್ನು ಸಮರ್ಪಕವಾಗಿ ತಲುಪಿಸುವ ಬಗ್ಗೆಯೂ ಚರ್ಚೆ ಮಾಡಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.