ADVERTISEMENT

ದೆಹಲಿ ಪ್ರವಾಸ ಯಶಸ್ವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 

​ಪ್ರಜಾವಾಣಿ ವಾರ್ತೆ
Published 11 ನವೆಂಬರ್ 2021, 21:04 IST
Last Updated 11 ನವೆಂಬರ್ 2021, 21:04 IST
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ   

ಬೆಂಗಳೂರು: 'ದೆಹಲಿ ಪ್ರವಾಸ ಯಶಸ್ವಿಯಾಗಿದೆ. ವಿಶೇಷವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿ, ಮುಂಬರುವ ದಿನಗಳಲ್ಲಿ ಇನ್ನಷ್ಟು ಜನಪರ ಕಾರ್ಯ ಕೈಗೊಳ್ಳುವ ವಿಶ್ವಾಸ ಮೂಡಿಸಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ತಮ್ಮ ಎರಡು ದಿನಗಳ ದೆಹಲಿ ಪ್ರವಾಸದಿಂದ ಹಿಂದಿರುಗಿದ ನಂತರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆಗುರುವಾರ ರಾತ್ರಿ ಅವರು ಮಾತನಾಡಿದರು.

'ಕಳೆದ ನೂರು ದಿನಗಳಲ್ಲಿ ಕೈಗೊಂಡ ನಿರ್ಣಯಗಳು, ಕಾರ್ಯಕ್ರಮಗಳ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು. ಹಲವು ಯೋಜನೆಗಳ ಕುರಿತು ಸಂಪೂರ್ಣ ಮಾಹಿತಿ ಪಡೆದರು. ವಿಶೇಷವಾಗಿ ಕೆಟಿಪಿಪಿ ಕಾಯ್ದೆ ತಿದ್ದುಪಡಿ ಕುರಿತು ಮಾಹಿತಿಯನ್ನು ಇತರ ರಾಜ್ಯಗಳೊಂದಿಗೆ ಹಂಚಿಕೊಂಡು ಅನುಷ್ಠಾನಗೊಳಿಸಲು ಸಲಹೆ ನೀಡುವುದಾಗಿ ತಿಳಿಸಿದರು' ಎಂದು ಮುಖ್ಯಮಂತ್ರಿ ಮಾಹಿತಿ ನೀಡಿದರು.

ADVERTISEMENT

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಕಲ್ಲಿದ್ದಲು ಕೊರತೆಯಾಗುವುದಿಲ್ಲ. ಕೇಂದ್ರ ಸರ್ಕಾರ ಒಡಿಶಾದ ಮಂದಾಕಿನಿ ಗಣಿಯಿಂದ ಕಲ್ಲಿದ್ದಲು ಪಡೆಯಲು ಅನುಮತಿ ನೀಡಿದೆ. ಮಹಾರಾಷ್ಟ್ರದಿಂದಲೂ ಕಲ್ಲಿದ್ದಲು ದೊರೆಯಲಿದೆ ಎಂದು ತಿಳಿಸಿದರು.

ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಗೆ ಸಂಬಂಧಿಸಿದಂತೆ ಕೇಂದ್ರದಿಂದ ಸುಮಾರು ₹ 2100 ಕೋಟಿ ಬಾಕಿ ಇರುವ ಕುರಿತು ಚರ್ಚಿಸಲಾಗಿದ್ದು ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರು ಈ ಅನುದಾನ ಬಿಡುಗಡೆ ಮಾಡಲು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.