ADVERTISEMENT

ಡಿಕೆಶಿ ಚೆನ್ನೈಗೆ ಹೋಗಿರುವುದು ಯಾವ ಪುರುಷಾರ್ಥಕ್ಕೆ: ಅಶೋಕ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಮಾರ್ಚ್ 2025, 10:42 IST
Last Updated 22 ಮಾರ್ಚ್ 2025, 10:42 IST
<div class="paragraphs"><p>ಆರ್. ಅಶೋಕ </p></div>

ಆರ್. ಅಶೋಕ

   

ಬೆಂಗಳೂರು: ಲೋಕಸಭಾ ಕ್ಷೇತ್ರಗಳ ಪುನರ್ ವಿಂಗಡನೆಗೆ ಸಂಬಂಧಿಸಿದಂತೆ ರಾಜ್ಯಗಳ ಮೇಲೆ ಪರಿಣಾಮ ಬೀರುವ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆದಿರುವ ಸಭೆಯಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಗವಹಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಟೀಕಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, 'ಡಿ.ಕೆ.ಶಿವಕುಮಾರ್ ಅವರೇ, ತಾವು ಚೆನ್ನೈ ಪ್ರವಾಸ ಕೈಗೊಂಡಿರುವುದು ಯಾವ ಪುರುಷಾರ್ಥಕ್ಕಾಗಿ' ಎಂದು ಪ್ರಶ್ನಿಸಿದ್ದಾರೆ.

ADVERTISEMENT

'ರಾಜ್ಯದಲ್ಲಿ ಇಡೀ ಕಾಂಗ್ರೆಸ್ ಸರ್ಕಾರವೇ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿಕೊಂಡು ಒದ್ದಾಡುತ್ತಿರುವಾಗ ಪಾರ್ಟ್ ಟೈಂ ಡಿಸಿಎಂ ಡಿ.ಕೆ.ಶಿವಕುಮಾರ್ ಸಾಹೇಬರು ತಮಗೆ ಸಂಬಂಧವೇ ಇಲ್ಲದಂತೆ ಚೆನ್ನೈ ಪ್ರವಾಸ ಕೈಗೊಂಡಿದ್ದಾರೆ' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಡಿಸಿಎಂಗೆ ಪ್ರಶ್ನೆಗಳನ್ನು ಎತ್ತಿದ್ದಾರೆ.

'ಮರೀನಾ ಬೀಚ್‌ನಲ್ಲಿ ಪಾದಯಾತ್ರೆ ಮಾಡಿ ಮೇಕೆದಾಟು ಯೋಜನೆಗೆ NOC ನೀಡುವಂತೆ ತಮಿಳುನಾಡು ಸಿಎಂ ಸ್ಟಾಲಿನ್ ಅವರ ಮೇಲೆ ಒತ್ತಡ ಹೇರುತ್ತೀರಾ? ಮೇಕೆದಾಟು ಯೋಜನೆಗೆ ಅವಕಾಶ ಕೊಡುವುದಿಲ್ಲ ಎಂದು ಖಡಾಖಂಡಿತವಾಗಿ ತಮ್ಮ ಪ್ರಣಾಳಿಕೆಯಲ್ಲಿ ಹೇಳಿರುವ ಡಿಎಂಕೆ ಪಕ್ಷದ ನಾಯಕರ ನಟ್ಟು-ಬೋಲ್ಟು ಟೈಟು ಮಾಡುತ್ತೀರಾ? ಅಥವಾ ತಮಿಳುನಾಡು ಸಿಎಂ ಸ್ಟಾಲಿನ್ ಅವರನ್ನ ಕೆ.ಆರ್.ಎಸ್‌ನಲ್ಲಿ ಕಾವೇರಿ ಆರತಿಗೆ ಆಹ್ವಾನಿಸಿ, ಕಾವೇರಿ ನೀರನ್ನು ಕೊಳ್ಳೆ ಹೊಡೆದು ಕನ್ನಡಿಗರ ಹಿತಾಸಕ್ತಿಗೆ ಕೊಳ್ಳಿ ಇಡುತ್ತೀರಾ?' ಎಂದು ಕೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.