ADVERTISEMENT

ಕಾಫಿ ಬೆಳೆಗಾರರ ಸಾಲಮನ್ನಾಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ಜನವರಿ 2021, 18:41 IST
Last Updated 22 ಜನವರಿ 2021, 18:41 IST

ಬೆಂಗಳೂರು: ‘ಕೊರೊನಾ, ಕಾಡುಪ್ರಾಣಿಗಳ ದಾಳಿ ಹಾಗೂ ಅಕಾಲಿಕ ಮಳೆಯಿಂದ ತೀವ್ರ ನಷ್ಟಕ್ಕೆ ಸಿಲುಕಿರುವ ಕಾಫಿ ಬೆಳೆಗಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಪರಿಹಾರ ನೀಡಬೇಕು ಹಾಗೂ ಕಾಫಿ ಬೆಳೆಗಾರರ ಸಾಲಮನ್ನಾ ಮಾಡಬೇಕು’ ಎಂದು ಕರ್ನಾಟಕ ಕಾಫಿ ಬೆಳೆಗಾರರ ಒಕ್ಕೂಟದ ಅಧ್ಯಕ್ಷ ಎಚ್.ಟಿ.ಮೋಹನ್‍ಕುಮಾರ್ ಒತ್ತಾಯಿಸಿದರು.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಕಾಫಿ ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿದ್ದಾರೆ. ಇತ್ತೀಚೆಗೆ ಸುರಿದಅಕಾಲಿಕ ಮಳೆಯಿಂದ ಕಾಫಿ ಬೆಳೆ ನಾಶವಾಗಿದೆ.ರೋಗ ಬಾಧೆ, ಬೆಲೆ ಕುಸಿತ, ಕಾರ್ಮಿಕರ ಕೊರತೆ, ಕಾಡುಪ್ರಾಣಿಗಳ ಹಾವಳಿಯಿಂದ ಬೆಳೆಗಾರರು ನಲುಗಿದ್ದಾರೆ.ಕಾಫಿ ಮಂಡಳಿ ಈ ನಷ್ಟ ಪ್ರಮಾಣದ ವರದಿ ಸಂಗ್ರಹಿಸಿ, ಸರ್ಕಾರಕ್ಕೆ ಸಲ್ಲಿಸಬೇಕು’ ಎಂದರು.

‘ಕಾಫಿ ಬೆಳೆಗೆ ಸೂಕ್ತ ರಕ್ಷಣೆ ಒದಗಿಸಲು ಕಾಫಿ ಪ್ರದೇಶದ ಕಾಡಾನೆಗಳನ್ನು ಸ್ಥಳಾಂತರಿಸಬೇಕು. ಕಾಡಾನೆ ದಾಳಿಯ ಹಾನಿಗೆ ಪರಿಹಾರ ನೀಡಬೇಕು. ಕೇರಳದ ಮಾದರಿ ರಾಜ್ಯದಲ್ಲೂ ಕಾಫಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು. ಕಾಫಿ ಬೆಳೆಗಾರರ ಸಾಲ ಮನ್ನಾ ಮಾಡಬೇಕು.ನರೇಗಾ ಯೋಜನೆಯ ಸೌಲಭ್ಯಗಳನ್ನು ಕಾಫಿ ಉದ್ಯಮಕ್ಕೂ ವಿಸ್ತರಿಸಬೇಕು. ಉದ್ಯಮ ಚೇತರಿಸಿಕೊಳ್ಳಲು ವಿಶೇಷ ಪ್ಯಾಕೇಜ್ ಘೋಷಿಸಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.