ಬೆಂಗಳೂರು: ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಕೆಲಸ ಮಾಡಿದ್ದ ಪಿಯು ಕಾಲೇಜಿನ ಎಲ್ಲ ಅತಿಥಿ ಉಪನ್ಯಾಸಕರನ್ನು 2025–26ನೇ ಸಾಲಿಗೂ ಮುಂದುವರಿಸಬೇಕು ಎಂದು ಸರ್ಕಾರಿ ಪದವಿಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆ ಒತ್ತಾಯಿಸಿದೆ.
2024–25ನೇ ಸಾಲಿನಲ್ಲಿ 4 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕೆಲಸ ಮಾಡಿದ್ದಾರೆ. ದ್ವಿತೀಯ ಪಿಯುನಲ್ಲಿ ಉತ್ತಮ ಫಲಿತಾಂಶಕ್ಕೆ ಕಾರಣರಾಗಿದ್ದಾರೆ. ಅವರಿಗೆ ಆದ್ಯತೆ ನೀಡಬೇಕು. ಈ ಬಾರಿ ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದರೂ ಇನ್ನೂ ನೇಮಕಾತಿ ಪ್ರಕ್ರಿಯೆ ಆರಂಭಿಸಿಲ್ಲ. ವಿಳಂಬ ಮಾಡಿದರೆ ಸರ್ಕಾರಿ ಕಾಲೇಜುಗಳ ದಾಖಲಾತಿ ಮೇಲೆ ಪರಿಣಾಮ ಬೀರುತ್ತದೆ. ತಕ್ಷಣ ನೇಮಕ ಪ್ರಕ್ರಿಯೆ ಆರಂಭಿಸಬೇಕು ಎಂದು ಸಂಘಟನೆಯ ಅಧ್ಯಕ್ಷ ಪದ್ಮಪ್ರಭ ಇಂದ್ರ, ಕಾರ್ಯದರ್ಶಿ ರಾಜೇಶ್ ಭಟ್ ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.