ADVERTISEMENT

ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ: ಮತ್ತೆ ಹೋರಾಟ–ಚರ್ಚೆ

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2022, 22:00 IST
Last Updated 24 ಡಿಸೆಂಬರ್ 2022, 22:00 IST
ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಒಕ್ಕಲಿಗರ ಸಂಘದ ನಿಯೋಗವು ಭೇಟಿ ಮಾಡಿ ಚರ್ಚಿಸಿತು
ಬೆಂಗಳೂರಿನ ವಿಜಯನಗರದ ಆದಿಚುಂಚನಗಿರಿ ಮಠದಲ್ಲಿ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಒಕ್ಕಲಿಗರ ಸಂಘದ ನಿಯೋಗವು ಭೇಟಿ ಮಾಡಿ ಚರ್ಚಿಸಿತು   

ಬೆಂಗಳೂರು: ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಪ್ರಮಾಣ ಹೆಚ್ಚಿಸುವ ಕುರಿತು ರಾಜ್ಯ ಸರ್ಕಾರವು ನಿರ್ಲಕ್ಷ್ಯಧೋರಣೆ ತಳೆದಿದ್ದು, ಮುಂದಿನ ಹೋರಾಟ ರೂಪಿಸುವ ಕುರಿತು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರೊಂದಿಗೆ ರಾಜ್ಯ ಒಕ್ಕಲಿಗರ ಸಂಘದ ನಿಯೋಗವು ಚರ್ಚೆನಡೆಸಿತು.

ಸಂಘದ ಅಧ್ಯಕ್ಷ ಸಿ.ಎನ್‌.ಬಾಲಕೃಷ್ಣ ಅವರ ನೇತೃತ್ವದ ನಿಯೋಗವು ಇಲ್ಲಿನ ವಿಜಯನಗರ ಶಾಖಾಮಠದಲ್ಲಿ ಸ್ವಾಮೀಜಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದೆ.

ಒಕ್ಕಲಿಗರ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕಾಗಿ ಯಾವ ಸ್ವರೂಪದ ಹೋರಾಟ ನಡೆಸಬೇಕು. ಎಂದಿನಿಂದ ಹೋರಾಟ ರೂಪಿಸಬೇಕು ಎಂದು ಚರ್ಚೆ ನಡೆಸಲಾಯಿತು ಎಂದು ಬಾಲಕೃಷ್ಣ ತಿಳಿಸಿದರು.

ADVERTISEMENT

ಒಕ್ಕಲಿಗರ ಸಂಘದ ಆವರಣದಲ್ಲಿ ಈಚೆಗೆ ನಡೆದಿದ್ದ ಮೀಸಲಾತಿ ಹೋರಾಟದ ಪೂರ್ವಭಾವಿ ಸಭೆಯಲ್ಲಿ ಒಕ್ಕಲಿಗರ ಸಮುದಾಯದ
ಮೀಸಲಾತಿ ಪ್ರಮಾಣವನ್ನು (3ಎ) ಶೇ 4ರಿಂದ ಶೇ 12ಕ್ಕೆ ಹೆಚ್ಚಿಸುವಂತೆಆಗ್ರಹಿಸಲಾಗಿತ್ತು. ರಾಜ್ಯಸರ್ಕಾರಕ್ಕೆ ಗಡುವು ನೀಡಲಾಗಿತ್ತು. ಆದರೆ, ಇದುವರೆಗೂ ಮೀಸಲಾತಿ ಹೆಚ್ಚಿಸುವ ಕುರಿತು ಸರ್ಕಾರ ನಿರ್ಧಾರ ಪ್ರಕಟಿಸಿಲ್ಲ. ಆದ್ದರಿಂದ,ಮುಂದಿನ ಹೋರಾಟ ನಡೆಸುವ ಕುರಿತು ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.