ADVERTISEMENT

ಅಲ್ಪಸಂಖ್ಯಾತರ ವಸತಿ ಶಾಲೆಗಳ ಪ್ರವೇಶಕ್ಕೆ ಹೆಚ್ಚು ಬೇಡಿಕೆ

​ಪ್ರಜಾವಾಣಿ ವಾರ್ತೆ
Published 27 ಏಪ್ರಿಲ್ 2025, 16:10 IST
Last Updated 27 ಏಪ್ರಿಲ್ 2025, 16:10 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಬೆಂಗಳೂರು: ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಒಟ್ಟು 11,330 ಸೀಟುಗಳು ಲಭ್ಯವಿದ್ದರೆ, ಪ್ರವೇಶಕ್ಕಾಗಿ 56,424 ಅರ್ಜಿಗಳು ಸಲ್ಲಿಕೆಯಾಗಿವೆ.

‘ಮೊರಾರ್ಜಿ ದೇಸಾಯಿ ವಸತಿ ಶಾಲೆ, ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಹಾಗೂ ಮುಸ್ಲಿಂ ವಸತಿ ಶಾಲೆಗಳ ಪ್ರವೇಶಕ್ಕೆ ಈಚಿನ ವರ್ಷಗಳಲ್ಲಿ ಬೇಡಿಕೆ ಹೆಚ್ಚಾಗಿದೆ. ರಾಜ್ಯದಲ್ಲಿರುವ 134 ಶಾಲೆಗಳೂ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ತೋರಿವೆ. ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕಾರಣ ಬೇಡಿಕೆ ಹೆಚ್ಚಾಗಿದೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದ ನಿರ್ದೇಶಕ ಜಿಲಾನಿ ಮೊಕಾಶಿ ತಿಳಿಸಿದ್ದಾರೆ.

ADVERTISEMENT

‘6ನೇ ತರಗತಿಯ 11,330 ಸೀಟುಗಳಿಗೆ ಪ್ರವೇಶ ಬಯಸಿ 56 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದ್ದರು. ಅವರಲ್ಲಿ 41 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪ್ರವೇಶ ಪ್ರಕ್ರಿಯೆಯನ್ನು ಆನ್‌ಲೈನ್‌ ಮೂಲಕವೇ ಪಾರದರ್ಶಕವಾಗಿ ನಡೆಸಲಾಗುತ್ತದೆ’ ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.