ADVERTISEMENT

ಡೀಸೆಲ್ ದರ ಇಳಿಕೆಗೆ ಆಗ್ರಹ: ಏಪ್ರಿಲ್ 15ರಂದು ಲಾರಿ ಮಾಲೀಕರ ಮುಷ್ಕರ

​ಪ್ರಜಾವಾಣಿ ವಾರ್ತೆ
Published 5 ಏಪ್ರಿಲ್ 2025, 11:42 IST
Last Updated 5 ಏಪ್ರಿಲ್ 2025, 11:42 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

ಬೆಂಗಳೂರು: ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಲಾರಿ ಮಾಲೀಕರ ಸಂಘ ಇದೇ 15ರಂದು ಬೆಳಿಗ್ಗೆ 6 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ನಿರ್ಧರಿಸಿದೆ.

ಈ ಕುರಿತು ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಮಾಲೀಕರ ಸಂಘದ ಅಧ್ಯಕ್ಷ ಜಿ.ಆರ್‌.ಷಣ್ಮುಗಪ್ಪ, ‘ಸರ್ಕಾರ, ಏಳು ತಿಂಗಳಲ್ಲಿ ಡೀಸೆಲ್ ಬೆಲೆ ₹5 ಏರಿಸಿದೆ. ಡೀಸೆಲ್ ದರವನ್ನು ಇಳಿಸುವಂತೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಬೇಡಿಕೆಗಳ ಈಡೇರಿಕೆಗಾಗಿ ಏಪ್ರಿಲ್‌ 14ರವರೆಗೆ ಸರ್ಕಾರಕ್ಕೆ ಗಡುವು ನೀಡಿದ್ದೇವೆ. ಅಂದು ಅಂಬೇಡ್ಕರ್ ಜಯಂತಿ. ಬೇಡಿಕೆಗಳನ್ನು ಈಡೇರಿಸದಿದ್ದರೆ 14ರ ರಾತ್ರಿಯಿಂದಲೇ ಹೋರಾಟ ಆರಂಭಿಸುತ್ತೇವೆ. ಹೋರಾಟ ಶುರುವಾದ ಬಳಿಕ ಯಾವುದೇ ರಾಜ್ಯದಿಂದ ಕರ್ನಾಟಕ ಒಳಗೆ ವಾಣಿಜ್ಯ ವಾಹನ ಸಂಚಾರ ಮಾಡುವುದಿಲ್ಲ. ಚೆಕ್ ಪೋಸ್ಟ್‌ಗಳಲ್ಲಿ ವಾಣಿಜ್ಯ ವಾಹನಗಳನ್ನ ಒಳಗಡೆ ಬಿಡದಂತೆ ನೋಡಿಕೊಳ್ಳುತ್ತೇವೆ’ ಎಂದು ಎಚ್ಚರಿಸಿದ್ದಾರೆ.

‘ಮುಷ್ಕರಕ್ಕೆ ಏರ್‌ಪೋರ್ಟ್‌ ಟ್ಯಾಕ್ಸಿ ಸಂಘ ಮತ್ತು ಪೆಟ್ರೊಲ್ ಬಂಕ್‌ ಸಂಘಟನೆಗಳು ಬೆಂಬಲ ಸೂಚಿಸಿವೆ. ಮುಷ್ಕರದ ದಿನ ಏರ್‌ಪೋರ್ಟ್ ಟ್ಯಾಕ್ಸಿ, ಜಲ್ಲಿ ಕಲ್ಲು, ಮರಳು ಲಾರಿ, ಗೂಡ್ಸ್ ವಾಹನಗಳು ಸೇರಿದಂತೆ ಸುಮಾರು ಆರು ಲಕ್ಷ ಲಾರಿಗಳ ಸಂಚಾರ ಸ್ಥಗಿತಗೊಳ್ಳಲಿದೆ. ಜೊತೆಗೆ ಅಕ್ಕಿ ಲೋಡ್, ಗೂಡ್ಸ್, ಪೆಟ್ರೋಲ್, ಡೀಸೆಲ್‌ ಸಾಗಾಟದ ಲಾರಿಗಳನ್ನೂ ಬಂದ್‌ ಮಾಡಲಾಗುತ್ತದೆ. ಇದಕ್ಕೆ ಚಾಲಕರ ಸಂಘದಿಂದಲೂ ಬೆಂಬಲ ವ್ಯಕ್ತವಾಗಿದೆ. ಎಲ್ಲಾ ಬಗೆಯ ವಾಣಿಜ್ಯ ವಾಹನಗಳು ಸೇರಿ ಸುಮಾರು 9 ಲಕ್ಷ ವಾಹನಗಳ ಸಂಚಾರ ಸ್ಥಗಿತವಾಗಲಿದೆ’ ಎಂದು ಅವರು ವಿವರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.