ADVERTISEMENT

ಒಬಿಸಿ ಸೇರ್ಪಡೆಗೆ ಕುಂಚಿಟಿಗರ ಒತ್ತಾಯ

ಹಿಂದುಳಿದ ವರ್ಗಕ್ಕೆ ಕುಂಚಿಟಿಗರ ಸೇರ್ಪಡೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 15 ಫೆಬ್ರುವರಿ 2021, 21:57 IST
Last Updated 15 ಫೆಬ್ರುವರಿ 2021, 21:57 IST
ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಜವಲಿಂಗೇಶ್ವರ ಸ್ವಾಮಿ ದೇವಸ್ಥಾನದ ಕಳಸ ಪ್ರತಿಷ್ಠಾಪನೆ ಹಾಗೂ ಧಾರ್ಮಿಕ ಜಾಗೃತಿ ಕಾರ್ಯಕ್ರಮದಲ್ಲಿ ಶಾಂತವೀರ ಸ್ವಾಮೀಜಿ, ಮಾಜಿ ಸಚಿವ ಟಿ.ಬಿ.ಜಯಚಂದ್ರ, ಸುರೇಶ್ ಬಾಬು, ಕೆ.ಎಲ್.ಮಹದೇವಪ್ಪ ಇದ್ದರು.
ಶಿರಾ ತಾಲ್ಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಜವಲಿಂಗೇಶ್ವರ ಸ್ವಾಮಿ ದೇವಸ್ಥಾನದ ಕಳಸ ಪ್ರತಿಷ್ಠಾಪನೆ ಹಾಗೂ ಧಾರ್ಮಿಕ ಜಾಗೃತಿ ಕಾರ್ಯಕ್ರಮದಲ್ಲಿ ಶಾಂತವೀರ ಸ್ವಾಮೀಜಿ, ಮಾಜಿ ಸಚಿವ ಟಿ.ಬಿ.ಜಯಚಂದ್ರ, ಸುರೇಶ್ ಬಾಬು, ಕೆ.ಎಲ್.ಮಹದೇವಪ್ಪ ಇದ್ದರು.   

ಶಿರಾ: ಕುಂಚಿಟಿಗ ಸಮಾಜದ ಕುಲಶಾಸ್ತ್ರ ಅಧ್ಯಯನದ ವರದಿಯನ್ನು ಸಂಪುಟ ಸಭೆಯಲ್ಲಿ ಯಥಾವತ್ತಾಗಿ ಮಂಡಿಸಿ, ಕುಂಚಿಟಿಗ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದು ಹೊಸದುರ್ಗದ ಕುಂಚಿಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶಾಂತವೀರ ಸ್ವಾಮೀಜಿಒತ್ತಾಯಿಸಿದ್ದಾರೆ.

ಚಿಕ್ಕನಹಳ್ಳಿ ಗ್ರಾಮದಲ್ಲಿ ಸೋಮವಾರ ನಡೆದ ಜವಲಿಂಗೇಶ್ವರ ಸ್ವಾಮಿ ದೇವಸ್ಥಾನದ ಕಳಸ ಪ್ರತಿಷ್ಠಾಪನೆ ಹಾಗೂ ಧಾರ್ಮಿಕ ಜಾಗೃತಿ ಸಭೆಯ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಚುನಾವಣೆ ಸಮಯದಲ್ಲಿ ಘೋಷಣೆ ಮಾಡಿದಂತೆ ಕುಂಚಿಟಿಗರನ್ನು ಹಿಂದುಳಿದ ವರ್ಗಕ್ಕೆ (ಒಬಿಸಿ) ಸೇರಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಆಗ್ರಹಿಸಿದರು.

ADVERTISEMENT

ಕೇಂದ್ರ ಸರ್ಕಾರಕ್ಕೆ ವರದಿ ಕಳುಹಿಸಿ ಜನಾಂಗಕ್ಕೆ ಒಬಿಸಿ ಸೌಲಭ್ಯ ದೊರಕಿಸಿಕೊಡುವ ಮೂಲಕ ಕೊಟ್ಟ ಮಾತನ್ನು ಯಡಿಯೂರಪ್ಪನವರು ಉಳಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

‘ಕುಂಚಿಟಿಗ ಸಮಾಜಕ್ಕೆ ಕೇಂದ್ರದಲ್ಲಿ ಒಬಿಸಿ ಮೀಸಲಾತಿ ನೀಡುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸಲಾಗುತ್ತಿದೆ. ಕುಲಶಾಸ್ತ್ರ ಅಧ್ಯಯನ ವರದಿ ಬಂದಿದ್ದು ತಕ್ಷಣ ಕುಂಚಿಟಿಗರಿಗೆ ಒಬಿಸಿ ಮೀಸಲಾತಿ ನೀಡಬೇಕು’ ಎಂದುಮಾಜಿ ಸಚಿವ ಟಿ.ಬಿ.ಜಯಚಂದ್ರ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.