ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಹಳೆ ಪಿಂಚಣಿ ವ್ಯವಸ್ಥೆ (ಒಪಿಎಸ್) ಜಾರಿಗೆ ಒತ್ತಾಯಿಸಿ ಫೆ.7ರಿಂದ ಅಹೋರಾತ್ರಿ ಧರಣಿ ನಡೆಸುತ್ತೇವೆ’ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತಾರಾಮ ಅವರು ಹೇಳಿದ್ದಾರೆ.
‘ಒಪಿಎಸ್ ಮರುಜಾರಿ ಮಾಡುತ್ತೇವೆ ಎಂದು 2024ರ ಜನವರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದರು. ಅಷ್ಟರಲ್ಲಿ ಕೇಂದ್ರ ಸರ್ಕಾರವು ಏಕೀಕೃತ ಪಿಂಚಣಿ ವ್ಯವಸ್ಥೆ (ಎನ್‌ಎಂಒಪಿಎಸ್) ಜಾರಿಗೆ ತಂದಿತು. ನಮ್ಮ ಸಂಘವು ಎನ್‌ಎಂಒಪಿಎಸ್ ಅನ್ನು ತಿರಸ್ಕರಿಸುತ್ತದೆ’ ಎಂದಿದ್ದಾರೆ.
‘ಒಪಿಎಸ್ ಮರುಜಾರಿಯನ್ನು ಈ ಸಾಲಿನ ಬಜೆಟ್‌ನಲ್ಲಿ ಘೋಷಿಸಬೇಕು. ಇಲ್ಲದಿದ್ದಲ್ಲಿ ಒಪಿಎಸ್ ಹಕ್ಕೊತ್ತಾಯ ಧರಣಿ ನಡೆಸುತ್ತೇವೆ’ ಎಂದು ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಸಂಗಣ್ಣನವರ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.