ADVERTISEMENT

ನಾಮದೇವ ಸಿಂಪಿ ಸಮಾಜಕ್ಕೆ ನಿಗಮ ಸ್ಥಾಪಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 21 ಮಾರ್ಚ್ 2023, 19:00 IST
Last Updated 21 ಮಾರ್ಚ್ 2023, 19:00 IST

ಬೆಂಗಳೂರು: ಸಮುದಾಯದ ಸಮಗ್ರ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪಿಸುವಂತೆ ನಾಮದೇವ ಸಿಂಪಿ ಸಮಾಜದ ‍‍ಪ್ರಮುಖರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.

‘‌ರಾಜ್ಯದಲ್ಲಿ ನಾಮದೇವ ಸಿಂಪಿ ಹಾಗೂ ಇದಕ್ಕೆ ಸಂಬಂಧಿಸಿದ ಉಪ ಪಂಗಡಗಳ 8 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇದೆ. ಬಟ್ಟೆ ಹೊಲಿಯುವುದು ಹಾಗೂ ಅದಕ್ಕೆ ಸಂಬಂಧಿಸಿದ ಇತರೆ ಉಪ ಕಸುಬುಗಳನ್ನು ಸಮುದಾಯದವರು ಕೈಗೊಂಡಿದ್ದು, ಯಾವುದೇ ಸಾಮಾಜಿಕ ಭದ್ರತೆ ಹೊಂದಿಲ್ಲ’ ಎಂದು ಸಮಾಜದ ಅಧ್ಯಕ್ಷ ಎನ್‌.ಎಂ. ಸುರೇಶ್‌ ಅವರ ನೇತೃತ್ವದ ನಿಯೋಗ ಮುಖ್ಯಮಂತ್ರಿಗೆ ಮನವರಿಕೆ ಮಾಡಿಕೊಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT