ADVERTISEMENT

ರವಿಕುಮಾರ್ ವಿರುದ್ಧ ಕ್ರಮ; ಸಿಎಂಗೆ ಐಎಎಸ್‌ ಅಧಿಕಾರಿಗಳ ಸಂಘ ಪತ್ರ

​ಪ್ರಜಾವಾಣಿ ವಾರ್ತೆ
Published 3 ಜುಲೈ 2025, 15:29 IST
Last Updated 3 ಜುಲೈ 2025, 15:29 IST
<div class="paragraphs"><p>ಸಿದ್ದರಾಮಯ್ಯ (ಸಂಗ್ರಹ ಚಿತ್ರ)</p></div>

ಸಿದ್ದರಾಮಯ್ಯ (ಸಂಗ್ರಹ ಚಿತ್ರ)

   

ಬೆಂಗಳೂರು: ‘ರಾಜ್ಯ ಮುಖ್ಯ ಕಾರ್ಯದರ್ಶಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿರುವ ವಿಧಾನ ಪರಿಷತ್ತಿನ ಸದಸ್ಯ ಎನ್‌.ರವಿಕುಮಾರ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿ ಕರ್ನಾಟಕ ಐಎಎಸ್‌ ಅಧಿಕಾರಿಗಳ ಸಂಘವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದೆ.

‘ಮುಖ್ಯ ಕಾರ್ಯದರ್ಶಿಯ ವಿರುದ್ಧ ರವಿಕುಮಾರ್ ಅವರು ಸಾರ್ವಜನಿಕವಾಗಿ ತುಚ್ಛ, ಅವಹೇಳನಕಾರಿ ಮತ್ತು ಘನತೆಗೆ ಧಕ್ಕೆ ತರುವಂತಹ ಮಾತುಗಳನ್ನು ಆಡಿದ್ದಾರೆ. ಇದು ಸಾರ್ವಜನಿಕ ಸಂಸ್ಥೆಗಳನ್ನೂ ಅವಹೇಳನ ಮಾಡುವಂತಹ ನಡೆ’ ಎಂದು ಸಂಘದ ಕಾರ್ಯದರ್ಶಿಯು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ADVERTISEMENT

‘ಇದೇ ರವಿಕುಮಾರ್ ಅವರು ಈ ಹಿಂದೆ ಕಲಬುರ್ಗಿ ಜಿಲ್ಲಾಧಿಕಾರಿ ವಿರುದ್ಧ ಆಧಾರರಹಿತ ಮತ್ತು ಕೋಮುವಾದಿ ಹೇಳಿಕೆ ನೀಡಿದ್ದರು. ಆಗಲೇ ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಪತ್ರ ಬರೆದಿದ್ದೆವು. ಆದರೆ ಅವರು ಸರ್ಕಾರಿ ಅಧಿಕಾರಿಗಳ ಸ್ಥೈರ್ಯ ಕುಗ್ಗಿಸುವಂತಹ ನಡೆಯನ್ನು ಮುಂದುವರಿಸಿದ್ದಾರೆ’ ಎಂದು ಹೇಳಿದ್ದಾರೆ.

‘ರವಿಕುಮಾರ್ ಅವರು ಬೇಷರತ್‌ ಕ್ಷಮೆ ಕೇಳಬೇಕು. ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಜತೆಗೆ ಈ ವಿಚಾರಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್ತಿನಲ್ಲಿ ನಿರ್ಣಯ ತೆಗೆದುಕೊಳ್ಳಬೇಕು’ ಎಂದು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.