ಬೆಂಗಳೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನೆನಪಿನಲ್ಲಿ ಮಕ್ಕಳಿಂದ ಒಂದೊಂದು ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಸಲಹೆ ನೀಡಿದರು.
ಪ್ರಜಾಪ್ರಭುತ್ವ ದಿನಾಚರಣೆ ಕುರಿತು ವಿಧಾನಸೌಧದಲ್ಲಿ ಗುರುವಾರ ನಡೆದ ಸಭೆಯಲ್ಲಿ ಅವರು ಈ ವಿಷಯ ತಿಳಿಸಿದರು.
ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ ಮೂಲಕ ಆಚರಿಸಲ್ಪಡುವ ಈ ದಿನದಂದು ವಿದ್ಯಾರ್ಥಿ ಸಮೂಹ, ಸಂಘಟನೆಗಳು ಮತ್ತು ಜನಸಾಮಾನ್ಯರು ಭಾಗವಹಿಸುವಂತೆ ಮಾಡಬೇಕು. ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳು ಜವಾಬ್ದಾರಿ ವಹಿಸಲಿದ್ದು, ಸ್ಥಳೀಯ ಮತ್ತು ನಗರ ಪಂಚಾಯಿತಿಗಳು ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಬೇಕು ಎಂದು ಮಹದೇವಪ್ಪ ಸೂಚನೆ ನೀಡಿದರು.
ಸಭೆಯಲ್ಲಿ ಪೌರಾಡಳಿತ ಸಚಿವ ರಹೀಂಖಾನ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.