ADVERTISEMENT

ಡೆಂಗಿ: 10 ಸಾವಿರ ದಾಟಿದ ಪ್ರಕರಣ

​ಪ್ರಜಾವಾಣಿ ವಾರ್ತೆ
Published 16 ಜುಲೈ 2024, 14:57 IST
Last Updated 16 ಜುಲೈ 2024, 14:57 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಬೆಂಗಳೂರು: ರಾಜ್ಯದಲ್ಲಿ ಡೆಂಗಿ ಪ್ರಕರಣಗಳು ಭಾರಿ ಏರಿಕೆ ಕಾಣುತ್ತಿದ್ದು, ಮಂಗಳವಾರ 487 ಮಂದಿಯಲ್ಲಿ ಹೊಸದಾಗಿ ಡೆಂಗಿ ಜ್ವರ ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ 10,449ಕ್ಕೆ ಏರಿಕೆಯಾಗಿದೆ. ‌

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಡೆಂಗಿ ಪರೀಕ್ಷೆಗಳ ಸಂಖ್ಯೆಯನ್ನೂ ಹೆಚ್ಚಳ ಮಾಡಲಾಗಿದ್ದು, 24 ಗಂಟೆಗಳಲ್ಲಿ 4,572 ಪರೀಕ್ಷೆಗಳನ್ನು ನಡೆಸಲಾಗಿದೆ. ಹೊಸದಾಗಿ ದೃಢಪಟ್ಟ ಪ್ರಕರಣಗಳಲ್ಲಿ ಒಂದು ವರ್ಷದೊಳಗಿನ ಮೂವರು ಮಕ್ಕಳೂ ಸೇರಿದ್ದಾರೆ. ಡೆಂಗಿ ಪೀಡಿತರಲ್ಲಿ ಸದ್ಯ 358 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. 

ADVERTISEMENT

ರಾಜ್ಯದ 24 ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ಖಚಿತಪಟ್ಟಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಸಲಾದ 2,724 ಪರೀಕ್ಷೆಗಳಲ್ಲಿ 283 ಮಂದಿಗೆ ಡೆಂಗಿ ದೃಢಪಟ್ಟಿದೆ. ಹಾಸನದಲ್ಲಿ 26, ತುಮಕೂರಿನಲ್ಲಿ 18, ಧಾರವಾಡದಲ್ಲಿ 17, ವಿಜಯಪುರದಲ್ಲಿ 16, ದಾವಣಗೆರೆ, ಹಾವೇರಿ, ಕಲಬುರಗಿ ಹಾಗೂ ಉಡುಪಿಯಲ್ಲಿ ತಲಾ 12 ಪ್ರಕರಣಗಳು ಖಚಿತಪಟ್ಟಿವೆ. ಉಳಿದೆಡೆ ಹೊಸ ಪ್ರಕರಣಗಳ ಸಂಖ್ಯೆ ಇದಕ್ಕಿಂತ ಕಡಿಮೆಯಿದೆ. 

ರಾಜ್ಯದಲ್ಲಿ ಎರಡು ವಾರದೊಳಗೆ ಮೂರು ಸಾವಿರಕ್ಕೂ ಅಧಿಕ ಪ್ರಕರಣಗಳು ದೃಢಪಟ್ಟಿವೆ. 8 ಮಂದಿ ಡೆಂಗಿಯಿಂದ ಈವರೆಗೆ ಮೃತಪಟ್ಟಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.