ADVERTISEMENT

ಡೆಂಗಿ: 10 ದಿನಗಳಲ್ಲಿ 350 ಮಂದಿಗೆ ಜ್ವರ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2021, 20:58 IST
Last Updated 5 ಅಕ್ಟೋಬರ್ 2021, 20:58 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಬೆಂಗಳೂರು: ಡೆಂಗಿ ಜ್ವರಕ್ಕೆ ಒಳ ಪಡುವವರ ಸಂಖ್ಯೆ ಏರಿಕೆ ಕಂಡಿದ್ದು, 10 ದಿನಗಳಲ್ಲಿ 350 ಪ್ರಕರಣಗಳು ವರದಿಯಾಗಿವೆ. ಈವರೆಗೆ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 3,736ಕ್ಕೆ ಏರಿಕೆಯಾಗಿದೆ.

ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೆಂಗಿ ಪ್ರಕರಣಗಳು ವರದಿಯಾಗಿವೆ. 13 ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಮೂರಂಕಿಯಲ್ಲಿದೆ.ಈ ವರ್ಷ ಮೊದಲ ಆರು ತಿಂಗಳ ಅವಧಿಯಲ್ಲಿ ಡೆಂಗಿ ನಿಯಂತ್ರಣದಲ್ಲಿತ್ತು. ಮಳೆ ಚುರುಕು
ಗೊಂಡ ಬಳಿಕ ಈ ಜ್ವರಕ್ಕೆ ಒಳಪಡುವವರ ಸಂಖ್ಯೆ ಏರುಗತಿ ಪಡೆದುಕೊಂಡಿದೆ. ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಈ ವರ್ಷ ರಾಜ್ಯದಲ್ಲಿ ಯಾವುದೇ ಡೆಂಗಿ ಮರಣ ಪ್ರಕರಣ ವರದಿಯಾಗಿಲ್ಲ.

ಕಳೆದ ವರ್ಷ 3,823 ಮಂದಿಯಲ್ಲಿ ಡೆಂಗಿ ಜ್ವರ ಕಾಣಿಸಿಕೊಂಡಿತ್ತು. ಅವರಲ್ಲಿ 5 ಮಂದಿ ಮೃತಪಟ್ಟಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.