ADVERTISEMENT

ರಾಜ್ಯದ ಹಲವೆಡೆ ದಟ್ಟ ಮಂಜು: ಹವಾಮಾನ ಇಲಾಖೆ ಮುನ್ಸೂಚನೆ

​ಪ್ರಜಾವಾಣಿ ವಾರ್ತೆ
Published 20 ಜನವರಿ 2025, 16:13 IST
Last Updated 20 ಜನವರಿ 2025, 16:13 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

– ಪಿಟಿಐ ಚಿತ್ರ

ಬೆಂಗಳೂರು: ನಗರ ಸೇರಿ ದಕ್ಷಿಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳಲ್ಲಿ ಮಂಗಳವಾರ ಮುಂಜಾನೆಯಿಂದ ಮೋಡ ಕವಿದ ವಾತಾವರಣದೊಂದಿಗೆ ದಟ್ಟ ಮಂಜು ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಕೆಲ ಜಿಲ್ಲೆಗಳಲ್ಲಿ ಕನಿಷ್ಠ, ಗರಿಷ್ಠ ತಾಪಮಾನದಲ್ಲಿ ಉಷ್ಠಾಂಶ ಕುಸಿತವಾಗಿ ಥಂಡಿಯ ವಾತಾವರಣ ಉಂಟಾಗಿತ್ತು.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ರಾಮನಗರ, ಹಾಸನ, ಪುತ್ತೂರು, ಮೂಲ್ಕಿ ಸಹಿತ ಕೆಲವು ಕಡೆಗಳಲ್ಲಿ ಭಾನುವಾರ ಸಾಧಾರಣ ಮಳೆಯಾಗಿದೆ.

ಮುಂಜಾನೆ ಮಂಜು ಬೀಳುವ ಸಂಭವವಿದ್ದು, ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ತಾಪಮಾನವು 16 ಡಿಗ್ರಿ ಸೆಲ್ಸಿಯಸ್‌ ಇರುವ ಸಾಧ್ಯತೆ ಇದೆ ಎಂದು ಇಲಾಖೆ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.