
ಪ್ರಜಾವಾಣಿ ವಾರ್ತೆ
ಬೆಂಗಳೂರು: ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್‌ಗೆ ಐವರು ಸದಸ್ಯರನ್ನು ನೇಮಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಮೈಸೂರು ಜೆಎಸ್‌ಎಸ್ ವೈದ್ಯಕೀಯ ಕಾಲೇಜಿನ ಪ್ರಾಧ್ಯಾಪಕ ಕೆ.ಸಿ. ಶಶಿಧರ್, ಚಿಕ್ಕಮಗಳೂರು ಜಿಲ್ಲೆ ಕಡೂರಿನ ವೈದ್ಯ ಭರತ್ ಅಂಚೆ, ಕೋರಮಂಗಲದ ವೈದ್ಯ ಶ್ರೀನಿವಾಸನ್ ವೇಲು, ಬೆಂಗಳೂರು ಈಸ್ಟ್ ಪಾಯಿಂಟ್ ವೈದ್ಯಕೀಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಎಂ. ಮಹೇಂದ್ರ, ಕಲಬುರಗಿಯ ಮಾಲಕರಡ್ಡಿ ಹೊಮಿಯೊಪತಿ ಕಾಲೇಜಿನ ಸಹ ಪ್ರಾಧ್ಯಾಪಕ ರವೀಂದ್ರ ಕಟ್ಟಿ ನೇಮಕಗೊಂಡ ಸದಸ್ಯರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.