ADVERTISEMENT

ಸಂಸದ ತೇಜಸ್ವಿ ಸೂರ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವಕನ ಬಂಧನ

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2020, 13:18 IST
Last Updated 21 ಏಪ್ರಿಲ್ 2020, 13:18 IST
ತೇಜಸ್ವಿ ಸೂರ್ಯ
ತೇಜಸ್ವಿ ಸೂರ್ಯ    

ಮಡಿಕೇರಿ: ಸಾಮಾಜಿಕ ಜಾಲತಾಣದಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಅವಹೇಳನಕಾರಿ ಆಗಿ ಪೋಸ್ಟ್ ಹಾಕಿದ್ದ ಯುವಕನನ್ನು ಜಿಲ್ಲಾ ಅಪರಾಧ ಪತ್ತೆದಳದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಪೊನ್ನತ್‌ಮೊಟ್ಟೆಯ ನಿವಾಸಿ ನಾಸಿರ್‌ ಬಂಧಿತ ಆರೋಪಿ.

ಇತ ಮಹಿಳೆಯರ ಬಗ್ಗೆಯೂ ಅವಹೇಳನಕಾರಿ ರೀತಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ. ವಿರಾಜಪೇಟೆಯ ವಿವೇಕ್ ರೈ ಅವರು ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಯುವಕನನ್ನು ಬಂಧಿಸಿದ್ದಾರೆ.‌

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.