ADVERTISEMENT

ತೀರ್ಥಹಳ್ಳಿ: ಮಂಗನ ಕಾಯಿಲೆ ವೈರಾಣು ಪತ್ತೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2020, 2:04 IST
Last Updated 3 ಜನವರಿ 2020, 2:04 IST
   

ತೀರ್ಥಹಳ್ಳಿ: ಬೇಸಿಗೆ ಆರಂಭಕ್ಕೂ ಮುನ್ನ ತಾಲ್ಲೂಕಿನ ಅನೇಕ ಕಡೆಗಳಲ್ಲಿ ಮಂಗಗಳ ಮೃತ ದೇಹಗಳು ಪತ್ತೆಯಾಗುತ್ತಿವೆ. ಮಂಡಗದ್ದೆ ಹೋಬಳಿ ಹೆಮ್ಮಕ್ಕಿ ಗ್ರಾಮದ 50 ವರ್ಷದ ನರಸಿಂಹ ಅವರ ದೇಹದಲ್ಲಿ ಮಂಗನ ಕಾಯಿಲೆ ರೋಗದ ವೈರಾಣು ಪತ್ತೆಯಾಗಿದ್ದು, ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಸೇರಿಸಲಾಗಿದೆ.

ತೀವ್ರ ಜ್ವರ ಕಾಣಿಸಿಕೊಂಡಿದ್ದ ನರಸಿಂಹ ಅವರು ತೀರ್ಥಹಳ್ಳಿ ಜೆ.ಸಿ ಆಸ್ಪತ್ರೆಗೆ ದಾಖಲಾಗಿದ್ದರು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲಕ್ಕೆ ಕಳುಹಿಸಿಕೊಡಲಾಗಿದೆ ಎಂದು ಜೆ.ಸಿ ಆಸ್ಪತ್ರೆ ವೈದ್ಯಾಧಿಕಾರಿ ಡಾ. ಅಶೋಕ್ ತಿಳಿಸಿದ್ದಾರೆ.

ನರಸಿಂಹ ಅವರ ದೇಹದಲ್ಲಿ ಮಂಗನ ಕಾಯಿಲೆ ವೈರಾಣು ಇರುವುದನ್ನುಶಿವಮೊಗ್ಗದ ಪರಿಮಾಣು ಕ್ರಿಮಿ ಸಂಶೋಧನಾ ಪ್ರಯೋಗಾಲಯ ದೃಢಪಡಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.