ADVERTISEMENT

ಮಾಜಿ ದೇವದಾಸಿಯರ ಮರು ಸಮೀಕ್ಷೆ ಅವಧಿ ಡಿ.31ರವರೆಗೆ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 0:52 IST
Last Updated 19 ಅಕ್ಟೋಬರ್ 2025, 0:52 IST
<div class="paragraphs"><p>ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ </p></div>

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ

   

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಮಾಜಿ ದೇವದಾಸಿಯರ ಮರು ಸಮೀಕ್ಷೆಯ ಅವಧಿಯನ್ನು 2025ರ ಡಿಸೆಂಬರ್‌ 31ರವರೆಗೆ ವಿಸ್ತರಿಸಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಆದೇಶಿಸಿದೆ.

ADVERTISEMENT

ಸೆಪ್ಟೆಂಬರ್‌ 15ರಿಂದ 15 ಜಿಲ್ಲೆಗಳಲ್ಲಿ ಮರು ಸಮೀಕ್ಷೆಯನ್ನು ಪ್ರಾರಂಭಿಸಲಾಗಿತ್ತು. ಈ ಜಿಲ್ಲೆಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಅಕ್ಟೋಬರ್ 15ರಂದು ಸಮುದಾಯದ ಸಂಸ್ಥೆಗಳೊಂದಿಗೆ ನಡೆದ ಸಭೆಯಲ್ಲಿ ಮರು ಸಮೀಕ್ಷೆಯ ಅವಧಿಯನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಆದೇಶದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.