ADVERTISEMENT

ರಾಜ್ಯಸಭೆ ಸ್ಪರ್ಧೆಗೆ ದೇವೇಗೌಡ ಸಮ್ಮತಿ: ಒಪ್ಪಿಸುವುದು ಕಷ್ಟವಾಯ್ತು ಎಂದ ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 8 ಜೂನ್ 2020, 6:46 IST
Last Updated 8 ಜೂನ್ 2020, 6:46 IST
ಎಚ್‌.ಡಿ.ದೇವೇಗೌಡ
ಎಚ್‌.ಡಿ.ದೇವೇಗೌಡ   

ಬೆಂಗಳೂರು: ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ರಾಜ್ಯಸಭೆ ಚುನಾವಣೆ ಸ್ಪರ್ಧೆಗೆ ನಿರ್ಧರಿಸಿದ್ದಾರೆ ಎಂದು ಜೆಡಿಎಸ್‌ ನಾಯಕಎಚ್‌.ಡಿ ಕುಮಾರಸ್ವಾಮಿ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ರಾಜ್ಯಸಭೆಗೆ ಸ್ಪರ್ಧೆ ಮಾಡುವಂತೆ ದೇವೇಗೌಡರನ್ನು ಒಪ್ಪಿಸುವುದು ಕಷ್ಟದ ಕೆಲಸವಾಗಿತ್ತು ಎಂದೂ ಎಚ್‌ಡಿಕೆ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

‘ಪಕ್ಷದ ಶಾಸಕರು, ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ರಾಷ್ಟ್ರದ ಹಲವು ನಾಯಕರ ಮನವಿಯ ಮೇರೆಗೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡರು ರಾಜ್ಯಸಭೆ ಚುನಾವಣೆ ಸ್ಪರ್ಧೆಗೆ ನಿರ್ಧರಿಸಿದ್ದಾರೆ. ನಾಳೆ ಅವರು ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುವರು. ಎಲ್ಲರ ಒಮ್ಮತದ ಅಭಿಪ್ರಾಯಕ್ಕೆ ಸಮ್ಮಿತಿಸಿದ ದೇವೇಗೌಡರಿಗೆ ಧನ್ಯವಾದಗಳು,’ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ADVERTISEMENT

‘ರಾಜಕೀಯದಲ್ಲಿ ಜನರಿಂದಲೇ ಗೆಲುವು ಸೋಲುಗಳನ್ನು ಕಂಡಿರುವ, ಜನರಿಂದಲೇ ದೇಶದ ಅತ್ಯುನ್ನ ಸ್ಥಾನಕ್ಕೇರಿದ್ದ ಜನನಾಯಕ ದೇವೇಗೌಡರಿಗೆ ರಾಜ್ಯಸಭೆ ಪ್ರವೇಶಿಸುವಂತೆ ಮನವೊಲಿಸುವುದು ಸುಲಭದ ಕೆಲಸವಾಗಿರಲಿಲ್ಲ. ಆದರೆ ಎಲ್ಲರ ಆಶೋತ್ತರಗಳಿಗೆ ಪ್ರೀತಿಪೂರ್ವಕವಾಗಿ ಮಣಿದಿದ್ದಾರೆ. ರಾಜ್ಯಸಭೆಯಲ್ಲಿ ದೇವೇಗೌಡರು ರಾಜ್ಯದ ಅಗ್ರ ಪ್ರತಿನಿಧಿಯಾಗಲಿದ್ದಾರೆ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.