ADVERTISEMENT

ಗಂಗಾ ರಥಗಳಿಗೆ ಇಂದು ಹಸಿರು ನಿಶಾನೆ

ಜನತಾ ಜಲಧಾರೆ: ದೇವೇಗೌಡರಿಂದ ಚಾಲನೆ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2022, 18:56 IST
Last Updated 11 ಏಪ್ರಿಲ್ 2022, 18:56 IST

ರಾಮನಗರ: ಜೆಡಿಎಸ್ ಹಮ್ಮಿಕೊಂಡಿರುವ ಜನತಾ ಜಲಧಾರೆ ಕಾರ್ಯಕ್ರಮದ ರಥಗಳಿಗೆ ಇದೇ 12ರಂದು ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಚಾಲನೆ ನೀಡಲಿದ್ದಾರೆ.

ರಾಮನಗರದ ಗ್ರಾಮ ದೇವತೆ ಚಾಮುಂಡೇಶ್ವರಿ ದೇವಾಲಯದಲ್ಲಿಮಂಗಳವಾರ ಬೆಳಗ್ಗೆ 10.30ಕ್ಕೆ ಪೂಜೆ ಸಲ್ಲಿಸಿ ಗಂಗಾ ರಥಗಳಿಗೆ ಚಾಲನೆ ನೀಡಲಾಗುವುದು. ಪಟ್ಟಣದ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಡೆಯಲಿರುವ ಸಮಾವೇಶದಲ್ಲಿ ಸಿ.ಎಂ. ಇಬ್ರಾಹಿಂ ಸೇರಿದಂತೆ ಪಕ್ಷದ ಶಾಸಕರು, ಹಿರಿಯ ಮುಖಂಡರು ಭಾಗಿ ಆಗಲಿದ್ದಾರೆ ಎಂದುಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘15 ಜನತಾ ಜಲಧಾರೆಗೆ ಕಳಸ ಪ್ರತಿಷ್ಠಾಪನೆ ಮಾಡಲಾಗಿದೆ. ರಾಜ್ಯದ 31 ಜಿಲ್ಲೆಯ 94 ಸ್ಥಳಗಳಲ್ಲಿರುವ ಪ್ರಮುಖ ನದಿ ಹಾಗೂ ಉಪ ನದಿಗಳಲ್ಲಿ ನೀರು ಸಂಗ್ರಹ ಮಾಡುತ್ತೇವೆ.
ಎಲ್ಲಾ ರಥಗಳು ಮೇ 8ರೊಳಗೆ ಬೆಂಗಳೂರು ಸೇರಲಿವೆ. ಪಕ್ಷದ ಕಚೇರಿ ಬಳಿ ಬೃಹತ್ ಕಳಸ ಸ್ಥಾಪನೆ ಮಾಡಿ ಅಲ್ಲಿ ಎಲ್ಲಾ ಜಿಲ್ಲೆಗಳಿಂದ ಬಂದನೀರನ್ನು ಇಟ್ಟು ಮುಂದಿನ ಚುನಾವಣೆವರೆಗೂ ಪೂಜೆ ಸಲ್ಲಿಸಲಾಗುವುದು’ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.