ADVERTISEMENT

ಎಲ್ಲ ಪೊಲೀಸ್ ಠಾಣೆಗಳಲ್ಲಿ ಉನ್ನತ ಅಧಿಕಾರಿಗಳ ದೂರವಾಣಿ ಸಂಖ್ಯೆ ಪ್ರದರ್ಶಿಸಬೇಕು: ಡಿಜಿಪಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಜೂನ್ 2023, 10:23 IST
Last Updated 16 ಜೂನ್ 2023, 10:23 IST
   

ಬೆಂಗಳೂರು: ರಾಜ್ಯದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಒಂದು ಫಲಕವನ್ನು ಹಾಕಿ ಉನ್ನತ ಪೊಲೀಸ್ ಅಧಿಕಾರಿಗಳ ಫೋನ್ ನಂಬರ್‌ಗಳನ್ನು ಪ್ರದರ್ಶಿಸಬೇಕು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ(ಡಿಜಿ–ಐಜಿಪಿ) ಅಲೋಕ್ ಮೋಹನ್ ಸುತ್ತೋಲೆ ಹೊರಡಿಸಿದ್ದಾರೆ.

ತಾವು ನೀಡಿದ ದೂರುಗಳಿಗೆ ಪೊಲೀಸರು ಸ್ಪಂದಿಸದಿಂದರೆ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಲು ಜನರಿಗೆ ಇದರಿಂದ ಸಾಧ್ಯವಾಗುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಪೊಲೀಸ್ ಠಾಣೆಯಲ್ಲಿ ನಿಮ್ಮ ಯಾವುದೇ ದೂರಿಗೆ ಸ್ಪಂದಿಸದಿದ್ದರೆ ಪೊಲೀಸ್ ಮುಖ್ಯಸ್ಥರು, ಡಿಸಿಪಿ, ಎಸಿಪಿಯನ್ನು ಸಂಪರ್ಕಿಸಿ ಎಂದು ಬರೆದು, ದೂರವಾಣಿ ಸಂಖ್ಯೆಗಳನ್ನು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ನಮೂದಿಸಬೇಕು ಎಂದು ತಿಳಿಸಲಾಗಿದೆ. ಕಮೀಷನರೇಟ್ ಮತ್ತು ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ ಎಸ್‌ಪಿ, ಎಎಸ್‌ಪಿ, ಡಿವೈಎಸ್‌ಪಿ ದೂರವಾಣಿ ಸಂಖ್ಯೆಗಳನ್ನೂ ನಮೂದಿಸಬೇಕು. 20 ಜೂನ್ 2023ರೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ತಿಳಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.