ಚಾಮರಾಜನಗರ: ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಗಣಿಯಲ್ಲಿ ಜಿಲೆಟಿನ್ ಸ್ಫೋಟ ಪ್ರಕರಣದ ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ಸೋಮವಾರ ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಗಣಿ ಸ್ಫೋಟ ಪ್ರಕರಣದ ತನಿಖೆ ನಡೆಯುತ್ತಿದೆ. ಯಾವುದೇ ಪ್ರಕರಣದ ತನಿಖೆ ನಡೆಯುತ್ತಿರುವಾಗ ಅದರ ವಿವರಗಳನ್ನು ನೀಡಲು ಸಾಧ್ಯವಿಲ್ಲ’ ಎಂದರು.
‘ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ, ಡ್ರಗ್ಸ್, ಮಾನವ ಕಳ್ಳಸಾಗಾಣಿಕೆ, ಅಕ್ರಮ ಗೋಸಾಗಾಣಿಕೆ ಸೇರಿದಂತೆ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳ ಬಗ್ಗೆ ತೀವ್ರ ನಿಗಾ ಇಡಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.